ಶಾಲೆ ಅಭಿವೃದ್ಧಿಗೆ ಸಹಕಾರ ಅವಶ್ಯ

SDMC
ಅಳವಂಡಿ ಸಮೀಪದ ಬೆಟಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ, ಉಪಾಧ್ಯಕ್ಷರನ್ನು ಸನ್ಮಾನಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ಸಿದ್ದಪ್ಪ ಕಲಕೇರಿ, ಉಪಾಧ್ಯಕ್ಷ ಸುಂಕಪ್ಪ ನಡುವಿನಮನಿ, ಮುಖ್ಯ ಶಿಕ್ಷಕಿ ಗಿರಿಜಾ, ಪ್ರಮುಖರಾದ ಸಿದ್ದು ಗುಡಿಮುಂದಿನ, ಶರಣಪ್ಪ ಮಡಿವಾಳ ಇತರರು ಇದ್ದರು.
Published on

ಅಳವಂಡಿ: ಗ್ರಾಮೀಣ ಪ್ರದೇಶದ ಶಿಕ್ಷಣ ಮಟ್ಟ ಸುಧಾರಿಸಲು ಸರ್ಕಾರ ಹಲವಾರು ಶೈಕ್ಷಣಿಕ ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳ ಉಪಯೋಗ ಮಕ್ಕಳಿಗೆ ತಲುಪಿ ವಿದ್ಯಾವಂತರನ್ನಾಗಿಸಬೇಕು ಎಂದು ಎಸ್‌ಡಿಎಂಸಿ ಅಧ್ಯಕ್ಷ ಸಿದ್ದಪ್ಪ ಕಲಕೇರಿ ತಿಳಿಸಿದರು.

ಎಸ್‌ಡಿಎಂಸಿ

ಸಮೀಪದ ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಎಸ್‌ಡಿಎಂಸಿ ಅಧ್ಯಕ್ಷರಾಗಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ಪ್ರತಿಯೊಬ್ಬರ ಸಹಕಾರ ಅವಶ್ಯವಾಗಿದೆ. ಪಾಲಕರು, ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒತ್ತು ನೀಡಬೇಕು.

ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸಬೇಕು ಹಾಗೂ ಅಧಿಕಾರಿಗಳು, ಜನಪ್ರತಿನಿಧಿಗಳ ಜೊತೆಗೆ ಚರ್ಚಿಸಿ ಶಾಲೆ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು. ಉಪಾಧ್ಯಕ್ಷ ಸುಂಕಪ್ಪ ನಡುವಿನಮನಿ, ಮುಖ್ಯ ಶಿಕ್ಷಕಿ ಗಿರಿಜಾ, ಪ್ರಮುಖರಾದ ಸಿದ್ದು ಗುಡಿಮುಂದಿನ, ಶರಣಪ್ಪ ಮಡಿವಾಳ, ಮರಿಯಪ್ಪ ಮತ್ತೂರ, ಮಾರೆಪ್ಪ ಕಲಕೇರಿ, ಗಾಳಿ ದುರ್ಗಪ್ಪ, ರವಿ, ಮೈಲಾರಪ್ಪ, ಪರಶುರಾಮ, ರಾಮಪ್ಪ ಹಾಗೂ ಶಿಕ್ಷಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net