

ಶನಿವಾರಸಂತೆ: ಸಮೀಪದ ಆಲೂರು-ಸಿದ್ದಾಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ 75 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ಶಾಲೆಯ ವಜ್ರ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಮಂಗಳವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಸಮಿತಿ ಸದಸ್ಯರು ತೀರ್ಮಾನಿಸಿದರು.
ವಜ್ರ ಮಹೋತ್ಸವ ಸಮಿತಿ ಕಾರ್ಯಾಧ್ಯಕ್ಷ ಪಿ.ಎಸ್.ಸತೀಶ್‌ಕುಮಾರ್ ಅಧ್ಯಕ್ಷತೆಯಲ್ಲಿ ಶಾಲಾ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿಗಳು, ಗ್ರಾಮಸ್ಥರು, ಶಿಕ್ಷಣ ಪ್ರೇಮಿಗಳು ಭಾಗವಹಿಸಿದ್ದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಮುಖ್ಯಶಿಕ್ಷಕ ಉದಯ್‌ಕುಮಾರ್, ಶಾಲಾ ವಜ್ರಮಹೋತ್ಸವದ ರೂಪುರೇಷೆಗಳ ಅನುಷ್ಠಾನಕ್ಕೆ ಹಳೆಯ ವಿದ್ಯಾರ್ಥಿಗಳು ಈಗಿನಿಂದಲೇ ಸಿದ್ಧತೆಯಲ್ಲಿ ತೊಡಗುವಂತೆ ಮನವಿ ಮಾಡಿದರು.
ಹಿರಿಯ ವಿದ್ಯಾರ್ಥಿ ಎಚ್.ಎಸ್.ಪ್ರೇಮ್‌ನಾಥ್ ಮಾತನಾಡಿ, ಶಾಲಾ ವಜ್ರಮಹೋತ್ಸವ ಅದ್ದೂರಿಯಾಗಿ ನಡೆಸಲು ಮೊದಲು ಆರ್ಥಿಕ ಕ್ರೋಡೀಕರಣವನ್ನು ತ್ವರಿತವಾಗಿ ಪ್ರಯತ್ನಿಸುವ ಅಗತ್ಯ ಇದೆ ಎಂದರು.
ಶಾಲಾ ವಜ್ರಮಹೋತ್ಸವ ಪ್ರಯುಕ್ತ ಶಾಲೆಗೆ ಸುಣ್ಣಬಣ್ಣ ಹೊಡೆಯುವುದು, ಶಾಲೆಯನ್ನು ಅಭಿವೃದ್ಧಿ ಪಡಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಮುಂದಿನ ಸಭೆ ಜು.29ರಂದು ನಡೆಸಲು ನಿರ್ಣಯಿಸಲಾಯಿತು.
ವಜ್ರಮಹೋತ್ಸವ ಸಮಿತಿ ಕಾರ್ಯಾಧ್ಯಕ್ಷ ಪಿ.ಎಸ್.ಸತೀಶ್‌ಕುಮಾರ್, ಕಾರ್ಯದರ್ಶಿ ಎಚ್.ಪಿ.ಕರುಂಭಯ್ಯ, ಹಿರಿಯ ವಿದ್ಯಾರ್ಥಿಗಳಾದ ಕಡ್ಯದ ಮಾಚಯ್ಯ, ಅಂಬ್ರಾಟಿ ಮಾದಪ್ಪ, ನಿವೃತ್ತ ಪ್ರಾಂಶುಪಾಲ ಎಚ್.ಮಾದಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಹೇಮಾನಂದ್, ಪ್ರಕಾಶ್, ವೀಣಾ, ನಿವೃತ್ತ ಅಭಿಯಂತರ ಸೋಮಯ್ಯ ಮುಂತಾದವರು ಇದ್ದರು.