ಶಾಲಾ ವಜ್ರ ಮಹೋತ್ಸವ ಪೂರ್ವಭಾವಿ ಸಭೆ ಇಂದು

Meeting 2
Published on

ಶನಿವಾರಸಂತೆ: ಸಮೀಪದ ಆಲೂರುಸಿದ್ದಾಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ 75ನೇ ವರ್ಷದ ಪ್ರಯುಕ್ತ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಶಾಲಾ ವಜ್ರಮಹೋತ್ಸವ ಕಾರ್ಯಕ್ರಮದ ಕುರಿತು ಹಳೆಯ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರ 4ನೇ ಪೂರ್ವಭಾವಿ ಜು.1ರಂದು ಆಯೋಜಿಸಲಾಗಿದೆ.

ಬೆಳಗ್ಗೆ 11 ಗಂಟೆಗೆ ಶಾಲಾ ಸಭಾಂಗಣದಲ್ಲಿ ನಡೆಯುವ ಸಭೆಯಲ್ಲಿ ಶಾಲೆ ಹಳೆಯ ವಿದ್ಯಾರ್ಥಿಗಳಾದ ವಿರಾಜಪೇಟೆ ಅರಮೇರಿ ಕಳಂಚೇರಿ ಮಠಾಧೀಶ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ರಾಜ್ಯ ಮಾಹಿತಿ ಆಯೋಗದ ನಿವೃತ್ತ ಆಯುಕ್ತ ಜೆ.ಎಸ್.ವಿರೂಪಾಕ್ಷಯ್ಯ ಭಾಗವಹಿಸಲಿದ್ದಾರೆ. ಹಳೆಯ ವಿದ್ಯಾರ್ಥಿಗಳು, ಗ್ರಾಮಸ್ಥರು ಪಾಲ್ಗೊಂಡು ಸಲಹೆ ಸಹಕಾರ ನೀಡುವಂತೆ ವಜ್ರಮಹೋತ್ಸವ ಸಮಿತಿ ಕಾರ್ಯದರ್ಶಿ ಎಚ್.ಪಿ.ಕರುಂಬಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net