ನಡುರಸ್ತೆಯಲ್ಲೇ ಬಡಿದಾಡ್ಕೊಂಡ್ರು ಶಾಲಾ ವಿದ್ಯಾರ್ಥಿನಿಯರು!

Students F
Published on

ಬೆಂಗಳೂರು: ಶಾಲೆ-ಕಾಲೇಜು ಎಂದ ಮೇಲೆ ವಿದ್ಯಾರ್ಥಿಗಳು ಹೊಡೆದಾಡಿಕೊಳ್ಳುವುದು ಸರ್ವೇಸಾಮಾನ್ಯ. ಆದರೆ ಇಲ್ಲೊಂದು ಕಡೆ ವಿದ್ಯಾರ್ಥಿನಿಯರೇ ನಡುರಸ್ತೆಯಲ್ಲೇ ಬಡಿದಾಡಿಕೊಂಡಿದ್ದಾರೆ.

ಎರಡು ವಿದ್ಯಾರ್ಥಿನಿಯರ ಗುಂಪು ನಡು ರಸ್ತೆಯಲ್ಲಿ ಪರಸ್ಪರ ಬಡಿದಾಡಿಕೊಂಡಿರುವ ಘಟನೆ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಡು ರಸ್ತೆಯಲ್ಲಿ ಹೊಡೆದಾಡಿಕೊಂಡಿರುವವರನ್ನು ಬಿಷಪ್ ಕಾಟನ್ ಶಾಲೆಯ ವಿದ್ಯಾರ್ಥಿನಿಯರು ಎನ್ನಲಾಗಿದೆ‌.

ಇವರಲ್ಲಿ ಬಹಳಷ್ಟು ವಿದ್ಯಾರ್ಥಿನಿಯರು ಸಮವಸ್ತ್ರ ಧರಿಸಿದ್ದು, ಜುಟ್ಟು ಹಿಡಿದುಕೊಂಡು ಹೊಡೆದಾಡಿಕೊಂಡಿದ್ದಾರೆ. ಈ ಬಡಿದಾಟದ ದೃಶ್ಯವನ್ನು ಸಾರ್ವಜನಿಕರು ಮೊಬೈಲ್​ಫೋನ್​ನಲ್ಲಿ ಚಿತ್ರೀಕರಿಸಿಕೊಂಡಿದ್ದು, ವಿಡಿಯೋ ವೈರಲ್​ ಆಗಿದೆ. ಆದರೆ ಈ ವಿದ್ಯಾರ್ಥಿನಿಯರು ಯಾವ ಶಾಲೆಯವರು ಹಾಗೂ ಯಾವ ಕಾರಣಕ್ಕೆ ಜಗಳ ಮಾಡಿಕೊಂಡಿದ್ದಾರೆ ಎಂಬ ಕುರಿತು ಖಚಿತ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net