ಪೂರ್ಣಪ್ರಜ್ಞಾ ವಿದ್ಯಾಸಂಸ್ಥೆಯಲ್ಲಿ ಶಾಲಾ ವೈಭವ ಕಾರ್ಯಕ್ರಮ

dance
Young people on the party .
Published on

ಮದ್ದೂರು: ಪಟ್ಟಣದ ಶಿವಪುರದ ಪೂರ್ಣಪ್ರಜ್ಞಾ ವಿದ್ಯಾಸಂಸ್ಥೆ 27ನೇ ವರ್ಷದ ಶಾಲಾ ವೈಭವ ಕಾರ್ಯಕ್ರಮವನ್ನು ಫೆ.7ರಂದು ಆಯೋಜಿಸಲಾಗಿದೆ ಎಂದು ವಿದ್ಯಾಸಂಸ್ಥೆ ಕಾರ್ಯದರ್ಶಿ ಎಚ್.ಆರ್.ಅನಂತೇಗೌಡ ಹೇಳಿದರು.

ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ಹಾಗೂ ಶಾಸಕ ಕೆ.ಎಂ.ಉದಯ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಾಲೆಯಲ್ಲಿ ವ್ಯಾಸಂಗ ಮಾಡಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳನ್ನು ಅಭಿನಂದಿಸಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಪರ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರಸ್ವಾಮಿ, ತಹಸೀಲ್ದಾರ್ ಡಾ.ಸ್ಮಿತಾರಾಮು, ಪುರಸಭೆ ಅಧ್ಯಕ್ಷೆ ಕೋಕಿಲಾ ಅರುಣ್, ನಿವೃತ್ತ ಪ್ರಾಂಶುಪಾಲ ಡಾ.ಬಿ.ಕೃಷ್ಣ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ ಎಂದರು.

ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಎಚ್.ಕಾಳಿರಯ್ಯ, ಬಿ.ಎನ್.ಮರಿಗೌಡ ಅವರನ್ನು ಅಭಿನಂದಿಸಲಾಗುವುದು. ಶಾಲಾ ವಿದ್ಯಾರ್ಥಿಗಳಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಹಿರಿಯ ಹಾಸ್ಯ ನಟ ಡಿಂಗ್ರಿ ನಾಗರಾಜು, ನಿರ್ದೇಶಕ ಶಂಕರ್, ಚಿತ್ರನಟ ಸ್ವಾತಿ ಲಿಂಗರಾಜು, ಬಿಗ್‌ಬಾಸ್ ಸ್ಪರ್ಧಿಗಳಾದ ಗೋಲ್ಡ್ ಸುರೇಶ್, ತುಕಾಲಿ ಸಂತೋಷ್ ಹಾಗೂ ಮಾನಸ ತುಕಾಲಿ ಸೇರಿದಂತೆ ಹಲವು ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪಾಲಕರನ್ನು ಹಾಗೂ ವಿದ್ಯಾರ್ಥಿಗಳನ್ನು ರಂಜಿಸಲಿದ್ದಾರೆ ಎಂದರು. ಸಂಸ್ಥೆ ಅಧ್ಯಕ್ಷೆ ಪಿ.ಕಸ್ತೂರಿ ಅನಂತೇಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net