

ಬೆಳಗಾವಿ: ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿಷಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥವಾಗಿರುವ ಘಟನೆ ನಡೆದಿದೆ.
ಸಾಲಹಳ್ಳಿಯಲ್ಲಿರುವ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ವಿಷಹಾರ ಸೇವಿಸಿ 5 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಬೆಳಿಗ್ಗೆ ರೈಸ್ ಫಲಾವ್ ಸೇವಿಸಿದಾಗ ಫಲಾವ್ ನಲ್ಲಿ ಹುಳುಗಳು ಪತ್ತೆಯಾಗಿದೆ. ಫಲಾವ್ ಸೇವಿಸಿದ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೈಕಿ 5 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರವಾಗಿ ಅಸ್ವಸ್ಥರಾಗಿದ್ದಾರೆ.