ಶಾಲೆಗೆ ಮಕ್ಕಳನ್ನು ತಪ್ಪದೆ ಕಳಿಸಿ

30mnv02
Published on

ಮಾನ್ವಿ: ಪಟ್ಟಣದ ಆದಾಪುರಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸಮೂಹ ಸಂಪನ್ಮೂಲ ಕೇಂದ್ರದಿಂದ ಗುರುವಾರ ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ ಅಂದೋಲನಾ ನಡೆಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಶಿಕ್ಷಕ ಎಚ್.ಟಿ.ಪ್ರಕಾಶಬಾಬು, ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಶಿಕ್ಷಣವನ್ನು ಉಚಿತವಾಗಿ ನೀಡಲಾಗುತ್ತಿದೆ. ಉಚಿತ ಸಮವಸ್ತ್ರ, ಪಠ್ಯಪುಸ್ತಕ ಪೂರೈಕೆಯೊಂದಿಗೆ ಬಿಸಿಯೂಟ, ಕ್ಷೀರಭಾಗ್ಯ ಸೇರಿ ಅನೇಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸಬೇಕು ಎಂದು ಮನವಿ ಮಾಡಿದರು. ಶಿಕ್ಷಕಿ ಲಕ್ಷ್ಮೀದೇವಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net