ಶಾಲಾ ಆರಂಭೋತ್ಸವ, ಪಠ್ಯ ಪುಸ್ತಕ ವಿತರಣೆ

pdb-3
Published on

ಆರ್ಡಿ: ಅಲ್ಬಾಡಿ ಮೂರುಕೈ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲಾ ಆರಂಭೋತ್ಸವದ ಪ್ರಯುಕ್ತ ಶಾಲೆಯನ್ನು ತಳಿರು ತೋರಣ, ಬಲೂನ್‌ಗಳಿಂದ ಅಲಂಕರಿಸಲಾಯಿತು. ಶೈಕ್ಷಣಿಕ ಸಾಲಿನಲ್ಲಿ ಶಾಲೆಗೆ ದಾಖಲಾತಿಗೊಂಡ ಮಕ್ಕಳನ್ನು ಗುಲಾಬಿ ಹೂವು ಹಾಗೂ ಸಿಹಿ ನೀಡಿ ಸ್ವಾಗತಿಸಲಾಯಿತು. ಸರ್ಕಾರದಿಂದ ನೀಡಿರುವ ಉಚಿತ ಪಠ್ಯಪುಸ್ತಕಗಳ್ನನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಎಸ್‌ಡಿಎಂಸಿ ಅಧ್ಯಕ್ಷ ಆನಂದ ಪೂಜಾರಿ ಮತ್ತು ಸದಸ್ಯರು, ಮುಖ್ಯ ಶಿಕ್ಷಕ ಹೆರಿಯಣ್ಣ ನಾಯ್ಕ, ಸಹ ಶಿಕ್ಷಕರು, ಹಳೇ ವಿದ್ಯಾರ್ಥಿ ಸಂ ಉಪಾಧ್ಯಕ್ಷೆ ಮನುಶ್ರೀ ಶೆಟ್ಟಿ ಹಾಗೂ ಸದಸ್ಯರು, ಅಂಗನವಾಡಿ ಕಾರ್ಯಕರ್ತೆ ಇಂದಿರಾ, ಮಕ್ಕಳ ಪಾಲಕರು, ಹಳೇ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net