ಕೊಳ್ಳೇಗಾಲ ಭಾಗದಲ್ಲಿ ಶಾಲೆ ಆರಂಭೋತ್ಸವ

 ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಶಾಲಾ ಪ್ರಾರಂಭೋತ್ಸವ ಹಿನ್ನೆಲೆಯಲ್ಲಿ ಎಸ್‌ಡಿಎಂಸಿ ಸದಸ್ಯರ ಸಭೆ ಆಯೋಜಿಸಲಾಗಿತ್ತು.
ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಶಾಲಾ ಪ್ರಾರಂಭೋತ್ಸವ ಹಿನ್ನೆಲೆಯಲ್ಲಿ ಎಸ್‌ಡಿಎಂಸಿ ಸದಸ್ಯರ ಸಭೆ ಆಯೋಜಿಸಲಾಗಿತ್ತು.
Published on

ಕೊಳ್ಳೇಗಾಲ: ಬೇಸಿಗೆ ರಜೆ ಮುಕ್ತಾಯವಾಗಿದ್ದು, ಮೇ 30ರಿಂದ ಶಾಲೆ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಬರ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಕೈ ಗೊಂಡಿದೆ.

ಕೊಳ್ಳೇಗಾಲ ತಾಲೂಕಿನಲ್ಲಿ 39 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, 59 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ 12 ಸರ್ಕಾರಿ ಪ್ರೌಢಶಾಲೆಗಳಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಅವರು ಈಗಾಗಲೇ ಆಯಾ ಶಾಲೆಗಳ ಮುಖ್ಯಶಿಕ್ಷಕರ ಹಾಗೂ ಎಸ್‌ಡಿಎಂಸಿ ಸದಸ್ಯರ ಸಭೆಗಳನ್ನು ನಡೆಸಿ ಶಾಲಾ ಪ್ರಾರಂಭೋತ್ಸವಕ್ಕೆ ಸಿದ್ಧತಾ ಕ್ರಮಗಳ ಬಗ್ಗೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ. ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲೂ ಸಿದ್ಧತೆ ನಡೆದಿದೆ.

ಶಾಲೆಯ ಆವರಣ, ಕೊಠಡಿ, ಶೌಚಗೃಹ, ಊಟದ ಕೊಠಡಿ, ಸ್ವಚ್ಛತೆ ನಡೆಸಬೇಕು. ಬಿಸಿಯೂಟ ವ್ಯವಸ್ಥೆ ಆರಂಭಿಸುವುದು, ಶೈಕ್ಷಣಿಕ ವೇಳಾಪಟ್ಟಿ ಯಾರಿಸುವುದು, ಹಸಿರು ತಳಿರು, ತೋರಣ ಕಟ್ಟಿ ವಿನೂತನವಾಗಿ ಕಾರ್ಯಕ್ರಮ ಆಯೋಜಿಸಲು ಕ್ರಮ ವಹಿಸಿದ್ದಾರೆ. ಕೊಳ್ಳೇಗಾಲದಲ್ಲಿ 10 ಕ್ಲಸ್ಟರ್‌ಗಳಿದ್ದು ಈ ಪೈಕಿ 2 ಕ್ಲಸ್ಟರ್ ಶಾಲೆಯೊಂದರಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ನಡೆಸಲು ತೀರ್ಮಾ ನಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು ಜನಪ್ರತಿನಿಧಿಗಳು, ಪಟ್ಟಣ ವ್ಯಾಪ್ತಿಯಲ್ಲಿ ನಗರಸಭೆ ಅಧ್ಯಕ್ಷರು ಹಾಗೂ ಸದಸ್ಯರನ್ನು ಆಹ್ವಾನಿಸಲಾಗುತ್ತಿದೆ. ಪ್ರತಿ ಶಾಲೆಗೆ ತಾಲೂಕು ಮಟ್ಟದ ಅಧಿಕಾರಿ ಅಥಿತಿಯಾಗಿ ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net