ಮಕ್ಕಳಿಗೆ ಆರತಿ ಇಟ್ಟು ತಿಲಕ ಇಟ್ಟು ಶಾಲೆಗೆ ಸ್ವಾಗತ

School re opening
Published on

ಕಾರವಾರ: ಮಕ್ಕಳಿಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಪಾಲಕರು ಸಹಕರಿಸಬೇಕು ಎಂದು ಎಂಎಲ್‌ಸಿ ಗಣಪತಿ ಉಳ್ವೇಕರ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ಅಮದಳ್ಳಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ಮಗುವಿಗೆ ಶಿಕ್ಷಣ ಅತಿ ಅವಶ್ಯ. ಅವರಿಗೆ ಪಾಠದ ಜತೆಗೆ ದೈಹಿಕ, ಮಾನಸಿಕ ಅಭಿವೃದ್ಧಿಗೆ ಎಲ್ಲ ರೀತಿಯ ಪ್ರೋತ್ಸಾಹ ನೀಡಬೇಕು ಎಂದರು.

ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಪ್ರಪಂಚದ ಎಲ್ಲ ರೀತಿಯ ಜ್ಞಾನವನ್ನು ಕೊಡುತ್ತಾರೆ. ಮಕ್ಕಳಿಗೆ ಪುಸ್ತಕ, ಶೂ. ಊಟ ಸೇರಿ ಹಲವು ಸೌಲಭ್ಯಗಳನ್ನು ಕೊಡಲಾಗುತ್ತದೆ. ಅವುಗಳನ್ನು ಬಳಸಿಕೊಂಡು ಉತ್ತಮ ಶಿಕ್ಷಣ ಪಡೆದು ಉನ್ನತ ಮಟ್ಟಕ್ಕೇರಿ ಶಾಲೆಯ, ಊರಿನ ಗೌರವ ಹೆಚ್ಚಿಸಿ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಅಮದಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪುರುಷೋತ್ತಮ ಗೌಡ, ಡಿಡಿಪಿಐ ಕಚೇರಿಯ ಅಽಕಾರಿ ಭಾಸ್ಕರ ಗಾಂವಕರ್ ವೇದಿಕೆಯಲ್ಲಿದ್ದರು. ಉಳ್ವೇಕರ್ ಅವರು ವಿದ್ಯಾರ್ಥಿಗಳಿಗೆ ಆರತಿ ಮಾಡಿ ತಿಲಕವಿಟ್ಟು, ಹೂವು ನೀಡಿ ಶಾಲೆಗೆ ಬರಮಾಡಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net