

ಕನಕಗಿರಿ: ತಾಲೂಕಿನ ಕಲಕೇರಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಮಂಜೂರಾದ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಸುಳೇಕಲ್ ಗ್ರಾಪಂ ಅಧ್ಯಕ್ಷೆ ಕವಿತಾ ಸೋಮವಾರ ಭೂಮಿಪೂಜೆ ನೆರವೇರಿಸಿದರು.
ನೂತನ ಕೊಠಡಿಗಳ ನಿರ್ಮಾಣಕ್ಕೆ ಕೆಕೆಆರ್‌ಡಿಬಿಯಡಿ 13.76 ಲಕ್ಷ ರೂ. ಅನುದಾನ ಮಂಜೂರಾಗಿದೆ. ಲೋಕೋಪಯೋಗಿ ಇಲಾಖೆ ಅನುಷ್ಠಾನಗೊಳಿಸಲಿದೆ. ವಿದ್ಯಾರ್ಥಿಗಳಿಗೆ ಕೊಠಡಿಗಳ ಸಮಸ್ಯೆ ಅರಿತು ಸಚಿವ ಶಿವರಾಜ ತಂಗಡಗಿ ಅವರು ನೂತನ ಕೊಠಡಿಗಳನ್ನು ನಿರ್ಮಿಸಲು ಅನುದಾನ ಮಂಜೂರು ಮಾಡಿಸಿದ್ದಾರೆ ಎಂದು ಗ್ರಾಪಂ ಅಧ್ಯಕ್ಷೆ ಕವಿತಾ ತಿಳಿಸಿದರು.
ಗ್ರಾಪಂ ಉಪಾಧ್ಯಕ್ಷ ಶಿವಾನಂದ ವಂಕಲಕುಂಟಿ, ಸದಸ್ಯರಾದ ಬೆಟ್ಟಪ್ಪ, ಪಿಡಿಒ ಲಕ್ಷ್ಮಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರಸ್ವಾಮಿ ಕಲುಬಾಗಿಲಮಠ, ಪಪಂ ಸದಸ್ಯ ಅನಿಲಕುಮಾರ ಬಿಜ್ಜಳ, ಪ್ರಮುಖರಾದ ನಾಗಪ್ಪ ಹುಗ್ಗಿ, ಸಿದ್ದಪ್ಪ ನಿರ್ಲೂಟಿ, ಈ.ನಾಗರಾಜ, ಈ. ಮಂಗಳೇಶ, ನಿರುಪಾದಿ, ವೀರೇಶ ಬೆನಕನಾಳ ಇತರರಿದ್ದರು.