ಶಾಲಾ ಕೊಠಡಿಯ ಮೇಲ್ಛಾವಣಿಯ ಪ್ಲಾಸ್ಟರ್ ಕುಸಿತ

19 Dwd 2
Published on

ಧಾರವಾಡ: ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕೊಠಡಿಯ ಮೇಲ್ಛಾವಣಿಯ ಪ್ಲಾಸ್ಟರ್ ಕುಸಿದ ಘಟನೆ ತಾಲೂಕಿನ ಬೋಗೂರ ಗ್ರಾಮದಲ್ಲಿ ಬುಧವಾರ ನಡೆದಿದೆ. ಗ್ರಾಮದ ಸರ್ಕಾರಿ ಶಾಲೆಯ ೮ನೇ ತರಗತಿ ವಿದ್ಯಾರ್ಥಿಗಳ ಕೊಠಡಿಯಲ್ಲಿ ಘಟನೆ ನಡೆದಿದ್ದು, ನಾಲ್ವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ಗರಗ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಇದೇ ಶಾಲೆಯ ೩ ಕೊಠಡಿಗಳು ಬೀಳುವ ಹಂತದಲ್ಲಿವೆ. ಈ ಬಗ್ಗೆ ಅಽಕಾರಿಗಳ ನಿರ್ಲಕ್ಷ ಮುಂದುವರಿದಿದ್ದು, ಮಕ್ಕಳಿಗೆ ಪ್ರಾಣಾಪಾಯವಾಗುವ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಪಾಲಕರು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net