ಸಚಿವ ಡಾ ಎಚ್ ಕೆ. ಪಾಟೀಲ ಅವರಿಂದ ನೂತನ ಶಾಲಾ ಕೊಠಡಿ ಉದ್ಘಾಟನೆ

AA
AA
Published on
ಗದಗ: ನಗರದ ಗಂಗಿಮಡಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಲೋಕೋಪಯೋಗಿ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ 2022-23ನೇ ಸಾಲಿನ ವಿವೇಕ ಯೋಜನೆಯಡಿ ನಿರ್ಮಿಸಲಾದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆ ನಂ. 7ರ ನೂತನ 2 ಕೊಠಡಿಗಳನ್ನು ಬುಧವಾರ ರಾಜ್ಯದ ಕಾನೂನು, ನ್ಯಾಯ , ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ.ಪಾಟೀಲ ಅವರು ಉದ್ಘಾಟನೆಗೊಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ರವಿ ಕಮತರ, ಕೆಡಿಪಿ ಸಮಿತಿಯ ಸದಸ್ಯರಾದ ಎಸ್ ಎನ್.ಬಳ್ಳಾರಿ, ಬಿ ಬಿ ಅಸೂಟಿ, ಅಶೋಕ ಮಂದಾಲಿ,ಎಸ್ ಡಿ ಎಂ ಸಿ ಅಧ್ಯಕ್ಷ ರಿಯಾಜ್ ಅಹಮ್ಮದ್ ಗುಡಸಲಮನಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್ ಎಸ್ ಬುರಡಿ,ಬಿ ಇ ಒ ಶ್ರೀಮತಿ ಮಂಗಳಾ ತಾಪಸ್ಕರ,ಶಾಲಾ ಮುಖ್ಯೋಪಾಧ್ಯಾಯನಿ ಎಸ್ ಆರ್ ಚಾಹುಸೇನ್ ,ಬಿಆರ್‌ಪಿ ಪ್ರಕಾಶ ಮಂಗಳೂರು ಗಣ್ಯರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net