ಪ್ರತಿ ಶಾಲೆಯಲ್ಲಿ ಸ್ಕೌಟ್ಸ್-ಗೈಡ್ಸ್ ಘಟಕ

10SND-02
Published on

ಸಿಂಧನೂರು: ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪ್ರಜ್ಞೆ, ದೇಶಾಭಿಮಾನ, ವಿನಯ ಮೂಡಿಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಪಾತ್ರ ಪ್ರಮುಖವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಹೇಳಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಧ್ವಜ ಚೀಟಿ ಬಿಡುಗಡೆಗೊಳಿಸಿ ಗುರುವಾರ ಮಾತನಾಡಿದರು. ಪ್ರತಿಯೊಂದು ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ಆರಂಭಿಸಿ, ಇಲಾಖೆ ಮಾರ್ಗಸೂಚಿ ಪ್ರಕಾರ ಕಾರ್ಯಕ್ರಮ ಅನುಷ್ಠಾನಕ್ಕೆ ತರಲು ಮುಖ್ಯ ಶಿಕ್ಷಕರಿಗೆ ತಿಳಿಸಲಾಗಿದೆ. ಇಲಾಖೆಯಿಂದ ಎಲ್ಲ ರೀತಿಯ ಸಹಕಾರ ಮತ್ತು ಮಾರ್ಗದರ್ಶನ ನೀಡಲಾಗುವುದು ಎಂದರು.

ಸಿಂಧನೂರಿನ ಘಟಕಕ್ಕೆ ನಿವೇಶನ ಹಾಗೂ ಕಟ್ಟಡದ ಅವಶ್ಯ ಬಗ್ಗೆ ಚರ್ಚಿಸಲಾಯಿತು. ಸಂಸ್ಥೆಯ ಸ್ಥಳೀಯ ಘಟಕದ ಅಧ್ಯಕ್ಷ ಎಸ್.ಶರಣೇಗೌಡ, ಕಾರ್ಯದರ್ಶಿ ಹಾಗೂ ಮುಕ್ತದಳ ಜಿಲ್ಲಾ ಸಹಾಯಕ ಆಯುಕ್ತ ಬೀರಪ್ಪ ಶಂಭೋಜಿ, ಸಹಾಯಕ ಆಯಕ್ತ ರಾಮದಾಸ ನಾಯಕ, ಅಂಬಣ್ಣ ನಾಯಕ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net