ಸರ್ಕಾರಿ ಶಾಲೆ ಅಭಿವೃದ್ಧಿಗೆ ಸಹಕರಿಸಿ

IMG-20250314-WA0055
Published on

ಹಿರೀಸಾವೆ: ಸರ್ಕಾರಿ ಶಾಲೆ ಅಭಿವೃದ್ಧಿಗೆ ಪಾಲಕರೂ ಸೇರಿದಂತೆ ಗ್ರಾಮಸ್ಥರು ಸಹಕರಿಸಬೇಕು ಎಂದು ಪಿಡಿಒ ಕೆ.ಎಸ್.ಪ್ರಕಾಶ್ ವಿನಂತಿಸಿದರು. ಕನುವನಘಟ್ಟ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು. ಪಾಲಕರು ಆಂಗ್ಲ ಮಾಧ್ಯಮದ ವ್ಯಾಮೋಹಕ್ಕೆ ಜೋತು ಬಿದ್ದಿರುವ ಪರಿಣಾಮ ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚುವ ಹಂತ ತಲುಪುತ್ತಿವೆ. ವಿದ್ಯಾರ್ಥಿಗಳ ಶೈಕ್ಷಣಿಕ ವ್ಯವಸ್ಥೆಯ ಅಭಿವೃದ್ಧಿಗಾಗಿ ಸರ್ಕಾರವು ಬಿಸಿಯೂಟ, ಸಮವಸ್ತ್ರ ಹಾಗೂ ಕ್ಷೀರಭಾಗ್ಯ ಸೇರಿದಂತೆ ಸಾಕಷ್ಟು ಸೌಲಭ್ಯ ಕಲ್ಪಿಸಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

5ರಿಂದ 6ನೇ ತರಗತಿಗೆ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಬೀಳ್ಕೊಡುಗೆ ನೀಡ ಲಾಯಿತು. ನಂತರ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಎನ್.ಹರಿಪ್ರಸಾದ್, ಎಚ್.ಕೆ.ಸುಧಾಕರ್, ದಿಡಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಾಮೇಗೌಡ, ಹೊಸಹಳ್ಳಿ ಶಾಲೆ ಮುಖ್ಯಶಿಕ್ಷಕ ಪಾಂಡುರಂಗಯ್ಯ, ಎಸ್‌ಡಿಎಂಸಿ ಅಧ್ಯಕ್ಷೆ ಗೀತಾ, ಶಾಲಾ ಮುಖ್ಯಶಿಕ್ಷಕಿ ಡಿ.ಮಂಜುಳಾ, ಪಾಳಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net