

ಕಲಬುರಗಿ: ಬಿಸಿಯೂಟದ ಸಾಂಬಾರ್ ಪಾತ್ರೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಚಿಣಮಗೇರಾದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿ ಮೃತಾಪಟ್ಟಿದ್ದಾಳೆ.
ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಚಿಣಮಗೇರ ಗ್ರಾಮದಲ್ಲಿರೋ ಶಾಲೆಯಲ್ಲಿ ನ 16 ರಂದು ಘೋರ ದುರಂತ ನಡೆದಿತ್ತು.
2 ನೇ ತರಗತಿ ಓದುತ್ತಿದ್ದ ಮಹಾಂತಮ್ಮ (8) ಬಿಸಿಯೂಟ ಸಾಂಬಾರ್ ಪಾತ್ರೆಯಲ್ಲಿ ಬಿದ್ದಿದ್ದ ವಿದ್ಯಾರ್ಥಿನಿ. ಗಂಭೀರ ಗಾಯಗೊಂಡಿದ್ದ ಮಹಾಂತಮ್ಮಳನ್ನ ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು
ನಿನ್ನೆಯಷ್ಟೇ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು
ನಸುಕಿನ ಜಾವ 3:30 ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಸಾವು
ಈ ಪ್ರಕರಣದಲ್ಲಿ ಈಗಾಗಲೇ ಮುಖ್ಯ ಶಿಕ್ಷಕ ಸಹ ಶಿಕ್ಷಕ , ಅಡುಗೆ ಮುಖಸ್ಥರನ್ನ ಅಮಾನತು ಮಾಡಲಾಗಿತ್ತು.