ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ ವಿದ್ಯಾರ್ಥಿಗಳು

RemasterDirector_22abe5b5f
RemasterDirector_22abe5b5f
Published on

ಪಿರಿಯಾಪಟ್ಟಣ: ಶಿಕ್ಷಣ ಇಲಾಖೆ ವತಿಯಿಂದ ತಾಲೂಕಿನ ವಿವಿಧ ಶಾಲೆಗಳ 8ನೇ ತರಗತಿಯ 96 ವಿದ್ಯಾರ್ಥಿಗಳು ಬುಧವಾರ ನಾಲ್ಕು ದಿನಗಳ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದರು.


ಪಟ್ಟಣದ ಶಿಕ್ಷಕರ ಸಭಾಂಗಣದ ಮುಂಭಾಗ ಬುಧವಾರ ಬೆಳಗ್ಗೆ ಕರ್ನಾಟಕ ದರ್ಶನ ಪ್ರವಾಸಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು ಚಾಲನೆ ನೀಡಿ ಮಾತನಾಡಿ, ಶಿಕ್ಷಣ ಇಲಾಖೆಯಿಂದ ಆಯೋಜಿಸಿರುವ ಶೈಕ್ಷಣಿಕ ಪ್ರವಾಸದಲ್ಲಿ ತಾಲೂಕಿನ ವಿವಿಧ ಶಾಲೆಗಳ ಒಟ್ಟು 96 ವಿದ್ಯಾರ್ಥಿಗಳಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ 56 ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ವರ್ಗದ 40 ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.


ನಾಲ್ಕು ದಿನಗಳ ಪ್ರವಾಸದಲ್ಲಿ ವಿದ್ಯಾರ್ಥಿಗಳು ಹಾಸನ ಜಿಲ್ಲೆಯ ಬೇಲೂರು ಹಳೇಬೀಡು, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಹೊರನಾಡು, ಆಗುಂಬೆ, ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಸುಬ್ರಹ್ಮಣ್ಯ, ಕಟೀಲು, ಕೊಡಗು ಜಿಲ್ಲೆಯ ತಲಕಾವೇರಿ ಭಾಗಮಂಡಲ ಸೇರಿದಂತೆ ವಿವಿಧ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.


ಶಿವರಾಜ್, ಪರಮಶಿವಯ್ಯ, ನಾಗಶೆಟ್ಟಿ, ಪುಟ್ಟರಾಜು, ಗಣೇಶ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net