

ಕೊಕ್ಕರ್ಣೆ: ಶ್ರೀ ಅನಿತಾ ವಿದ್ಯಾಸಂಸ್ಥೆಯ ಅಂಗ ಸಂಸ್ಥೆ ದುರ್ಗಾ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ ಹಾಗೂ ಮಾಸ್ಟರ್ ಪ್ರಧಾನ್ ಕಲಾ ಮಂಚ್ ಶಾಲಾ ರಂಗಮಂಟಪವನ್ನು ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಉದ್ಘಾಟಿಸಿದರು.
ರಂಗಮಂಟಪ ನಿರ್ಮಿಸಿ ಕೊಟ್ಟ ದಾನಿಗಳಾದ ಚೇತನ್ ಕುಮಾರ್ ಶೆಟ್ಟಿ, ಪತ್ನಿ ದೀಪಾ ಚೇತನ್ ಕುಮಾರ್ ಶೆಟ್ಟಿ, ಸಂಸ್ಥೆಯ ಅಧ್ಯಕ್ಷ ಚಾರ್ಟರ್ಡ್ ಅಕೌಂಟೆಂಟ್ ಎಸ್.ಬಿ.ಶೆಟ್ಟಿ ಹುಬ್ಬಳ್ಳಿ, ಜಿಲ್ಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಗಣಪತಿ, ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಡಿ.ಟಿ.ಪ್ರಭು, ಸಂಸ್ಥೆಯ ಉಪಾಧ್ಯಕ್ಷ ಕೆ.ಚಂದ್ರಶೇಖರ್ ಶೆಟ್ಟಿ, ಕಾರ್ಯದರ್ಶಿ ಕೆ.ಶೇಖರ್ ಹೆಗ್ಡೆ, ಜತೆ ಕಾರ್ಯದರ್ಶಿ ಹರಿಶ್ಚಂದ್ರ ಶೆಟ್ಟಿ, ಖಜಾಂಚಿ ಕೆ.ಜಯರಾಮ್ ಶೆಟ್ಟಿ, ಸಂಸ್ಥೆಯ ಸದಸ್ಯರು, ಶಾಲೆಯ ಪ್ರಾಂಶುಪಾಲ ಕೆ. ಚಂದ್ರಶೇಖರ್, ಶಾಲೆಯ ಶಿಕ್ಷಕ ರಕ್ಷಕ ಸಮಿತಿ ಅಧ್ಯಕ್ಷರು, ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.