Heavy Rains In ಬೆಂಗಳೂರು; ಶಾಲಾ-ಕಾಲೇಜಿಗಳಿಗೆ ನಾಳೆ ರಜೆ ಘೋಷಣೆ

Heavy Rain
Published on

ಬೆಂಗಳೂರು: ವಾಯುಭಾರ ಕುಸಿತದಿಂದಾಗಿ ಬೆಂಗಳೂರಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು (Heavy Rains), ನಗರದ ಹಲವು ಭಾಗಗಳು ಜಲಾವೃತಗೊಂಡಿವೆ (Water Logging). ಇದೀಗ ಮಳೆಯ ಕಾರಣದಿಂದಾಗಿ ರಾಜ್ಯ ಸರ್ಕಾರವು ನಾಳೆ (ಅಕ್ಟೋಬರ್​ 23) ಬೆಂಗಳೂರು ಭಾಗದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಈ ಬಗ್ಗೆ ಜಿಲ್ಲಾಧಿಕಾರಿ (DC) ಜಗದೀಶ್​ ಅವರು ಆದೇಶವನ್ನು ಹೊರಡಿಸಿದ್ದಾರೆ.

ವಾಯುಭಾರ ಕುಸಿತದಿಂದಾಗಿ ಮುಂದಿನ ಕೆಲವು ದಿನಗಳ ಕಾಲ ನಗರದಾದ್ಯಂತ ಭಾರೀ ಮಳೆಯಾಗಲಿದ್ದು, ಮುಂಜಾಗ್ರತ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಬೆಂಗಳೂರು ನಗರದಲ್ಲಿ ಕಳೆದ ಎರಡು ದಿನದಿಂದ ಮಳೆಯಾಗುತ್ತಿದೆ. ಅದರಲ್ಲೂ ಮಂಗಳವಾರ ಜೋರಾಗಿ ಸುರಿದಿದೆ. ನಗರದ ರಸ್ತೆಗಳಲ್ಲಿ ಭಾರೀ ಪ್ರಮಾಣದ ನೀರು ನಿಂತು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಇನ್ನು ನಗರ ತಗ್ಗು ಪ್ರದೇಶಗಳು, ಉದ್ಯಾನವನಗಳು, ಅಂಡರ್‌ಪಾಸ್‌ಗಳಲ್ಲಿ ನೀರು ನುಗ್ಗಿ ದೊಡ್ಡ ಅವಾಂತರಗಳಾಗಿವೆ.

ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಆದರೆ, ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಎಂಜಿನಿಯರಿಂಗ್, ಐಟಿಐ ಕಾಲೇಜುಗಳಿಗೆ ರಜೆ ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net