

ಹಿರೇಕೆರೂರ: ಶಾಲೆಗಳು ವಿದ್ಯಾರ್ಥಿಗಳಿಗೆ ಉತ್ತಮ ಅಂಕ ಗಳಿಸಿ ಕೊಡುವ ಫ್ಯಾಕ್ಟರಿಗಳಾಗಬಾರದು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ಪಟ್ಟಣದ ಶಾಂತಿಧಾಮದ ಶ್ರೀ ತರಳಬಾಳು ಸಿಬಿಎಸ್ಇ ಶಾಲೆ ಆವರಣದಲ್ಲಿ ಬುಧವಾರ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಯು.ಬಿ. ಬಣಕಾರ, ಪಾಲಕರು ಮಕ್ಕಳನ್ನು ಜವಾಬ್ದಾರಿಯುತವಾಗಿ ನೀತಿ ಪಾಠಗಳನ್ನು ಹೇಳುವುದರೊಂದಿಗೆ ಉತ್ತಮ ನಾಗರಿಕರನ್ನಾಗಿಸಬೇಕು ಎಂದರು.
ದಾವಣಗೆರೆಯ ಎವಿಕೆ ಮಹಿಳಾ ಪ್ರಥಮ ದರ್ಜೆ ಕಾಲೇಜ್ ಪ್ರಾಧ್ಯಾಪಕ ಡಾ.ಎಚ್.ಎಸ್. ಮಂಜುನಾಥ ಕುರ್ಕಿ ಮಾತನಾಡಿ, ಉತ್ತಮ ಶಿಕ್ಷಣದಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.
ಸಂಸ್ಥೆಯ ಉಪಾಧ್ಯಕ್ಷ ಈರಪ್ಪ ಬಣಕಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯ ಸಿ.ಎಚ್. ನಂದಿಹಳ್ಳಿ, ಶಾಲೆಯ ಪ್ರಗತಿ ವರದಿ ವಾಚನ ಮಾಡಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಮತ್ತು ಮನೋರಂಜನಾ ಕಾರ್ಯಕ್ರಮ ನಡೆದವು.
ಉಮಾ ಕಚವಿ, ಕೆ. ಪೂಜಾ ಮತ್ತು ಪ್ರತೀಕ್ಷಾ ನಂದಿಹಳ್ಳಿ, ವೇಣು ಹುಲ್ಲತ್ತಿ, ಹರೀಶ ಕುಮಾರ, ಬಿಂದು ಜೋಗಿಹಳ್ಳಿ ಕಾರ್ಯಕ್ರಮ ನಿರ್ವಹಿಸಿದರು. ಪಪಂ ಅಧ್ಯಕ್ಷೆ ಸುಧಾ ಚಿಂದಿ, ಉಪಾಧ್ಯಕ್ಷ ರಾಜು ಕರಡಿ, ಸದಸ್ಯೆ ಕವಿತಾ ಹಾರ್ನಳ್ಳಿ, ಇತರರಿದ್ದರು.