ಸೋಮವಾರದಿಂದ ಶಾಲೆ ಆರಂಭ: ಕೆಲವು ಶಾಲೆಗಳಿಗೆ ಸಿಎಂ ಭೇಟಿ!

School
Published on

ಬೆಂಗಳೂರು: ಕರೊನಾ ಮುಂಜಾಗ್ರತಾ ಕ್ರಮ ಕೈಗೊಂಡು ಸೋಮವಾರದಿಂದ ಶಾಲೆ ಆರಂಭಿಸಲಾಗುತ್ತಿದ್ದು, ಆ ಸಂದರ್ಭದಲ್ಲಿ ಬೆಂಗಳೂರಿನ ಕೆಲವು ಶಾಲೆಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್​​ ಅವರು ಭೇಟಿ ನೀಡಲಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು, ಈ ವಿಷಯ ತಿಳಿಸಿದ್ದಾರೆ. 9ನೇ ತರಗತಿ ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆ ಸೋಮವಾರದಿಂದ ಆರಂಭವಾಗಲಿದೆ. ಇದಕ್ಕೆ ಸರ್ಕಾರದಿಂದ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಶಿಕ್ಷಕರಿಗೆ ವ್ಯಾಕ್ಸಿನೇಷನ್‌ ಹಾಗೂ‌ ಶಾಲೆಗಳಿಗೆ ಸ್ಯಾನಿಟೈಜ್ ಮಾಡಲಾಗಿದೆ ಎಂದು ತಿಳಿಸಿದರು.

ಪೋಷಕರ ಸಮ್ಮತಿಯನ್ನು ಪಡೆದು ಮಕ್ಕಳು ಶಾಲೆಗೆ ಬರತಕ್ಕದ್ದು. ಯಾವುದೇ ಆತಂಕ ಇಲ್ಲದೆ ಮಕ್ಕಳು ಶಾಲೆಗೆ ಬರಬಹುದು ಎಂದು ಹೇಳಿದ ಸಿಎಂ, ಪೋಷಕರು ಕೂಡ ಎಲ್ಲರೂ ಕರೊನಾ ಲಸಿಕೆ ಹಾಕಿಸಿಕೊಳ್ಳಬೇಕು. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಂತ ಹಂತವಾಗಿ ಎಲ್ಲ ಶಾಲೆಗಳೂ ಆರಂಭವಾಗಲಿವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net