ಕೋಟೇಶ್ವರ ಪಬ್ಲಿಕ್ ಸ್ಕೂಲ್‌ನಲ್ಲಿ ವಿಜ್ಞಾನಗೋಷ್ಠಿ

gan (8)
Published on

ಕುಂದಾಪುರ: ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ಕೋಟೇಶ್ವರದ ರೋಟರಿ ಕ್ಲಬ್ ಸಹಯೋಗದೊಂದಿಗೆ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕುಂದಾಪುರ ತಾಲೂಕುಮಟ್ಟದ ವಿಜ್ಞಾನಗೋಷ್ಠಿ ಮತ್ತು ವಿಜ್ಞಾನ ನಾಟಕ ಸ್ಪರ್ಧೆಯನ್ನು ರೋಟರಿ ಕ್ಲಬ್ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ ಉದ್ಘಾಟಿಸಿದರು.

ಚಂದ್ರಶೇಖರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ನಾಟಕ, ವಿಜ್ಞಾನಗೋಷ್ಠಿಯ ನಿಯಮಗಳ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಶಿಕ್ಷಣ ಸಂಯೋಜಕ ರಾಜಾ ಖಾರ್ವಿ ವಿವರಿಸಿದರು. ಗಣೇಶ್ ಕೃಷ್ಣ ಭಾಗವತ್, ಪ್ರಕಾಶ್ ಶೆಟ್ಟಿ, ಸತ್ಯನಾರಾಯಣ ಜಿ., ಕುಮಾರಸ್ವಾಮಿ ಮತ್ತು ಅಶೋಕ್ ಉಪಸ್ಥಿತರಿದ್ದರು. ರೇಷ್ಮಾ ಸ್ವಾಗತಿಸಿದರು. ಜಯಶ್ರೀ ಗಣೇಶ್ ಭಾಗವತ್ ವಂದಿಸಿದರು. ದಿವ್ಯಪ್ರಭಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net