ಸರ್ಕಾರಿ ಶಾಲೆಗಳು ದೇಶದ ಉಸಿರು : ಮಮತಾ ಡಿ.ಎಸ್.ಗಟ್ಟಿ ಬಣ್ಣನೆ

38
Published on

ಬಂಟ್ವಾಳ: ಸರ್ಕಾರಿ ಶಾಲೆಗಳು ಈ ದೇಶದ ಉಸಿರಾಗಿದ್ದು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ತನ್ನ ಶಿಕ್ಷಣದ ಮೇರು ಹಂತವನ್ನು ತಲುಪಲು ಸಾಧ್ಯವಾಗಿದೆ ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್.ಗಟ್ಟಿ ಹೇಳಿದರು.

ಮಂಚಿ-ಕೊಳ್ಳಾಡು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ವಿಜ್ಞಾನ ವಸ್ತುಪ್ರದರ್ಶನ ಹಾಗೂ ರಂಗೋತ್ಸವ, ಕಟ್ಟಡಗಳ ಹಸ್ತಾಂತರ ನೆರವೇರಿಸಿ ಮಾತನಾಡಿದರು.

ಎಂ.ಆರ್.ಪಿ.ಎಲ್. ಸಂಸ್ಥೆಯ ಸಿ.ಎಸ್.ಆರ್ ನಿಧಿಯಿಂದ ನಿರ್ಮಾಣವಾದ ಸುಸಜ್ಜಿತ ಶೌಚಗೃಹ ಮತ್ತು ಎನ್.ಎಂ.ಪಿ.ಎ. ಸಂಸ್ಥೆಯ ಸಿ.ಎಸ್.ಆರ್.ನಿಧಿಯಿಂದ ನಿರ್ಮಾಣವಾದ ತರಗತಿ ಕೊಠಡಿ ಹಸ್ತಾಂತರಿಸಲಾಯಿತು.

ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಎಂ.ಜಿ. ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ವಿಜ್ಞಾನ ವಸ್ತುಪ್ರದರ್ಶನಕ್ಕೆ ಉದ್ಯಮಿ ಮಾಧವ ಮಾವೆ ಚಾಲನೆ ನೀಡಿದರು. ಕೊಳ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶ್ರಫ್ ಮಾತನಾಡಿದರು.

ಕೃಷಿಕ ವಿಶ್ವನಾಥ ನಾಯ್ಕ ನಿರ್ಬೈಲು, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಸವಿತಾ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮ್ ಪ್ರಸಾದ್ ರೈ ತಿರುವಾಜೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಶಿಕ್ಷಕ ಜಗನ್ನಾಥ ಪುರುಷ ಸ್ವಾಗತಿಸಿದರು. ಮುಖ್ಯಶಿಕ್ಷಕಿ ಸುಶೀಲಾ ವಿಟ್ಲ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ಶಿವಕುಮಾರ್ ಎಂ.ಜಿ.ಸ್ವಾಗತಿಸಿದರು. ಶಿಕ್ಷಕಿ ಪ್ರೇಮಲತಾ ಕಾರ್ಯಕ್ರಮ ನಿರ್ವಹಿಸಿದರು.

ಸಾಧಕರಿಗೆ ದತ್ತಿನಿಧಿ ವಿತರಣೆ

ಶಾಲೆಯ ವಿದ್ಯಾರ್ಥಿಗಳು ರಚಿಸಿರುವ ಕೊಲಾಜ್ ಚಿತ್ರಗಳು, ಮುಖವಾಡದ ರಚನೆ ಹಾಗೂ ಇನ್ನಿತರ ಕಲಾಕೃತಿಗಳ ಪ್ರದರ್ಶನಕ್ಕೆ ಶಾಲೆಯ ಹಳೇ ವಿದ್ಯಾರ್ಥಿ ಚಂದ್ರಹಾಸ ರೈ ಬಾಲಾಜಿಬೈಲು ಚಾಲನೆ ನೀಡಿದರು. ರಂಗೋತ್ಸವ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಯಕ್ಷಗಾನ ನಾಟ್ಯ ಪ್ರದರ್ಶನಗೊಂಡಿತು. ಶೈಕ್ಷಣಿಕ ಸಾಲಿನಲ್ಲಿ ಪಠ್ಯ ವಿಷಯದಲ್ಲಿ ವಿಶೇಷ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ರಾಜೀವ ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ಸುಭಾಷ್ ಚಂದ್ರ ಶೆಟ್ಟಿ ಕುಳಾಲು ದತ್ತಿನಿಧಿ ವಿತರಣೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net