ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಹಾಸನ ಫಸ್ಟ್, ಮೈಸೂರು ರನ್ನರ್‌ಅಪ್

Mandya VV
Published on

ಮಂಡ್ಯ: ನಗರದ ಮಂಡ್ಯ ವಿಶ್ವವಿದ್ಯಾನಿಲಯದಲ್ಲಿ ಗುರುವಾರ ಆಯೋಜಿಸಿದ್ದ ಮೈಸೂರು ವಿಭಾಗ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಹಾಸನದ ಎ.ವಿ.ಕೆ ಮಹಿಳಾ ಕಾಲೇಜು ಪ್ರಥಮ ಸ್ಥಾನ ಹಾಗೂ ಮೈಸೂರಿನ ಮಹಿಳಾ ವಿಜ್ಞಾನ ಕಾಲೇಜು ದ್ವಿತೀಯ ಬಹುಮಾನ ಪಡೆದುಕೊಂಡಿತು.
ರಾಜ್ಯ ವಿಜ್ಞಾನ ಪರಿಷತ್, ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ ಜಿಲ್ಲೆಗಳ ವಿವಿಧ ಕಾಲೇಜುಗಳಿಂದ 25 ತಂಡ ಹೆಸರು ನೋಂದಣಿ ಮಾಡಿಸಿಕೊಂಡಿದ್ದವು. ಅಂತೆಯೇ 50ಕ್ಕೂ ಹೆಚ್ಚು ವಿದ್ಯಾರ್ಥಿಗಳ ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.
ಮನುಕುಲಕ್ಕಾಗಿ ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರ ಎಂಬ ವಿಷಯಗಳನ್ನಿಟ್ಟುಕೊಂಡು ವಿದ್ಯಾರ್ಥಿಗಳು ತಯಾರಿಸಿದ್ದ ಮಾದರಿಯ ಎಲ್ಲರ ಗಮನಸೆಳೆದವು. ನಿದ್ದೆ ನಿಯಂತ್ರಿಸುವ ಯಂತ್ರ, ಗ್ರಂಥಾಲಯದಲ್ಲಿ ಪುಸ್ತಕಗಳ ಮಾಹಿತಿ ಕಂಪ್ಯೂಟರೀಕರಣ, ಶುದ್ಧ ಮತ್ತು ಹಸಿರು ಶಕ್ತಿ. ಆಹಾರ ಆರೋಗ್ಯ ಮತ್ತು ನೈರ್ಮಲ್ಯ, ಬಾಹ್ಯಾಕಾಶ ಹುಡುಕಾಟ, ಪರಿಸರ ಸ್ನೇಹಿ ತಂತ್ರಜ್ಞಾನ ಮತ್ತು ಪ್ಲಾಸ್ಟಿಕ್ ಮಾಲಿನ್ಯ ನಿಯಂತ್ರಣ, ಜೈವಿಕ ತಂತ್ರಜ್ಞಾನ ಮತ್ತು ಆರೋಗ್ಯದ ವಿಜ್ಞಾನ ಮಾದರಿಗಳ ಉಪಶೀರ್ಷಿಕೆ ಸೇರಿದಂತೆ ವಿವಿಧ ಮಾದರಿಯು ವಿದ್ಯಾರ್ಥಿಗಳ ಗಮನ ಸೆಳೆದವು. ಮಂಡ್ಯ ವಿಶ್ವವಿದ್ಯಾನಿಲಯ ಮೂರು, ಮೈಸೂರು ಮಹಾರಾಣಿ ಕಾಲೇಜು ನಾಲ್ಕು ಹಾಗೂ ಮಂಡ್ಯ ವಿಶ್ವವಿದ್ಯಾನಿಲಯ ಐದನೇ ಬಹುಮಾನ ಪಡೆದುಕೊಂಡಿತು.
ಮಂಡ್ಯ ವಿವಿ ಕುಲಪತಿ ಡಾ.ಪುಟ್ಟರಾಜು, ರಾಜ್ಯ ವಿಜ್ಞಾನ ಪರಿಷತ್‌ನ ಶಿವಶಂಕರ್, ಬಸವರಾಜು, ಸಿ.ಕೃಷ್ಣೇಗೌಡ, ಎನ್.ರಮೇಶ್, ಮನ್‌ಮುಲ್ ನಿರ್ದೇಶಕ ಶಿವಪ್ಪ ಉಮ್ಮಡಹಳ್ಳಿ, ಸರ್ಕಾರಿ ಮಹಾವಿದ್ಯಾಲಯದ ಪ್ರಾಂಶುಪಾಲ ಬಿ.ಸಿ.ರವಿ, ಬಿ.ಸಿ.ಕರೀಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net