

ಕಾಸರಗೋಡು: ಶೈಕ್ಷಣಿಕ ಉಪ ಜಿಲ್ಲಾ ವಿಜ್ಞಾನ ಮೇಳ ಎಡನೀರು ಸ್ವಾಮೀಜೀಸ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಅ.13 ಹಾಗೂ 14ರಂದು ನಡೆಯಲಿದ್ದು, ಪೂರ್ವಭಾವಿಯಾಗಿ ಸ್ವಾಗತ ಸಮಿತಿ ರಚನಾ ಸಭೆ ಶಾಲೆಯಲ್ಲಿ ನೆರವೇರಿತು.
ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಸಮಾರಂಭ ಉದ್ಘಾಟಿಸಿದರು. ಚೆಂಗಳ ಗ್ರಾಪಂ ಉಪಾಧ್ಯಕ್ಷೆ ಶಫಿಯಾ ಹಾಶಿಂ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಎನ್.ಎ.ನೆಲ್ಲಿಕ್ಕುನ್ನು ಮುಖ್ಯ ಅತಿಥಿಯಾಗಿದ್ದರು. ಕಾಸರಗೋಡು ಶೈಕ್ಷಣಿಕ ಉಪ ಜಿಲ್ಲಾ ಶಿಕ್ಷಣಾಧಿಕಾರಿ ಅಗಸ್ಟಿನ್ ಬರ್ನಾರ್ಡ್ ಮೇಳದ ಬಗ್ಗೆ ಮಾಹಿತಿ ನೀಡಿದರು.
ಎಡನೀರು ಮಠದ ಪ್ರಬಂಧಕ ರಾಜೇಂದ್ರ ಕಲ್ಲೂರಾಯ, ನಿವೃತ್ತ ಜಿಲ್ಲಾ ವಿದ್ಯಾಧಿಕಾರಿ ಇ.ವೇಣುಗೋಪಾಲ್, ಕೆ.ಮಾಧವ ಹೇರಳ, ಎ.ಎನ್.ನಾರಾಯಣನ್, ಗೋಪೀನಾಥನ್ ಕೆ., ವಿನೋದ್ ಕುಮಾರ್ ಪೆರುಂಬಳ ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಪ್ರಾಂಶುಪಾಲ ಪಿ.ಪ್ರಭಾಕರನ್ ಸ್ವಾಗತಿಸಿದರು. ಮುಖ್ಯಶಿಕ್ಷಕಿ ಜ್ಯೋತಿಲಕ್ಷ್ಮೀ ಎಸ್. ವಂದಿಸಿದರು. ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಗೌರವಾಧ್ಯಕ್ಷರಾಗಿರುವ ಸ್ವಾಗತ ಸಮಿತಿ ರಚಿಸಲಾಯಿತು. ಸಂಚಾಲಕರಾಗಿ ಕೆ.ಸುಕುಮಾರನ್, ಅಧ್ಯಕ್ಷರಾಗಿ ಖಾದರ್ ಬದ್ರಿಯಾ ಅವರನ್ನು ಆಯ್ಕೆ ಮಾಡಲಾಯಿತು.