ಮಾರ್ಕಾಲು ದೇವರಾಜುಗೆ ರಾಜ್ಯಮಟ್ಟದ ಪ್ರಶಸ್ತಿ: ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಗುರುಮೂರ್ತಿ ಮಾಹಿತಿ

Scientific Research Council Press Conference Mandya
Published on

ಮಂಡ್ಯ: ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ನಿಂದ ಕೊಡಮಾಡುವ ರಾಜ್ಯಮಟ್ಟದ ಕಾಯಕರತ್ನ ಪ್ರಶಸ್ತಿಗೆ ಅಂತಾರಾಷ್ಟ್ರೀಯ ಚಿತ್ರ ಕಲಾವಿದ ಮಾರ್ಕಾಲು ದೇವರಾಜು ಆಯ್ಕೆಯಾಗಿದ್ದಾರೆ ಎಂದು ಪರಿಷತ್ ಜಿಲ್ಲಾ ಉಪಾಧ್ಯಕ್ಷ ಗುರುಮೂರ್ತಿ ತಿಳಿಸಿದರು.
ಮಳವಳ್ಳಿ ತಾಲೂಕು ಮಾರ್ಕಾಲು ಗ್ರಾಮದ ದೇವರಾಜು ಪದವೀಧರರಾಗಿದ್ದು, ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಮಾಡಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 1991ನೇ ಸಾಲಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ನೀಡುವ ಡಾ.ಬಿ.ಆರ್.ಅಂಬೇಡ್ಕರ್ ರಾಷ್ಟ್ರಪ್ರಶಸ್ತಿ, ಬುದ್ಧ ರಾಷ್ಟ್ರೀಯ ಪ್ರಶಸ್ತಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಗಣರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ರಾಷ್ಟ್ರ ಮತ್ತು ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅವರ ಸೇವೆ ಗುರುತಿಸಿ 2024ನೇ ಸಾಲಿನ ರಾಜ್ಯ ಕಾಯಕ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಜು.13ರಂದು ಬೀದರ್‌ನಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ವಿವರಿಸಿದರು.
ಪರಿಷತ್ ಜಿಲ್ಲಾಧ್ಯಕ್ಷ ಶಿವಲಿಂಗಯ್ಯ, ಮಹಿಳಾ ಘಟಕದ ಉಪಾಧ್ಯಕ್ಷೆ ಪುಷ್ಪಲತಾ, ಸಂಘಟನಾ ಕಾರ್ಯದರ್ಶಿ ಲಂಕೇಶ್, ನಿರ್ದೇಶಕರಾದ ಜಯರಾಮ, ವೆಂಕಟಚಲಯ್ಯ ಉಪಸ್ಥಿತರಿದ್ದರು.

ಮಾರ್ಕಾಲು ದೇವರಾಜು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net