

ಚಿಕ್ಕಮಗಳೂರು: ಜಲಜೀವನ್ ಮಿಷನ್ ಕಾಮಗಾರಿಯನ್ನು ವೈಜ್ಞಾನಿಕವಾಗಿ ನಿರ್ವಹಿಸಿ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಒದಗಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಪಂ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಲಜೀವನ್ ಮಿಷನ್ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದೆ. ಭಾರತದ ಗ್ರಾಮೀಣ ಪ್ರದೇಶದ ಪ್ರತಿ ಮನೆಗೂ ವೈಯಕ್ತಿಕವಾಗಿ ಟ್ಯಾಪ್ ಸಂಪರ್ಕಗಳ ಮೂಲಕ ಸುರಕ್ಷಿತವಾಗಿ ಸಮರ್ಪಕ ಶುದ್ಧ ಕುಡಿಯುವ ನೀರು ಒದಗಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯಡಿಯಲ್ಲಿ ನಿರ್ವಹಿಸುತ್ತಿರುವ ಕಾಮಗಾರಿಯನ್ನು ಗ್ರಾಮದಲ್ಲಿ ನೀರಿನ ಮೂಲಗಳನ್ನು ಗುರುತಿಸಿ ವೈಜ್ಞಾನಿಕವಾಗಿ ಪೈಪ್ ಅಳವಡಿಸಿ ಸಮರ್ಪಕವಾಗಿ ಸಂಪರ್ಕ ಕಲ್ಪಿಸಲು ಅಗತ್ಯ ಕ್ರಮ ಕೈಗೊಂಡು ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ಕಡೂರಿನಿಂದ ಚಿಕ್ಕಮಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟಿçÃಯ ಹೆದ್ದಾರಿಯ ಬದಿಯಲ್ಲಿ ಹಣ್ಣಿನ ಹಾಗೂ ಇತರೆ ಮರಗಳ ಸಸಿಗಳನ್ನು ನೆಟ್ಟು ಅವುಗಳನ್ನು ಸರಿಯಾಗಿ ನಿರ್ವಹಿಸಬೇಕು. ಈ ಮೂಲಕ ಪರಿಸರ ತೋರಲು ಸಂಬAಧಿಸಿದ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದರು.
ಇತರೆ ಪ್ರದೇಶಗಳಿಂದ ಉದ್ಯೋಗ ಅರಸಿ ಜಿಲ್ಲೆಗೆ ಬರುವ ಪ್ರತಿಯೊಬ್ಬ ವಲಸೆ ಕಾರ್ಮಿಕರ ಸ್ಪಷ್ಟ ಮಾಹಿತಿಯನ್ನು ಕಲೆ ಹಾಕಿ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿರುವವರ ವಿರುದ್ಧ ಕಾನೂನು ಕ್ರಮ ವಹಿಸಬೇಕು. ಕಾರ್ಖಾನೆ ಹಾಗೂ ಇತರೆ ಕಾಫಿ ಎಸ್ಟೇಟ್‌ಗಳಲ್ಲಿ ಕೆಲಸ ನಿರ್ವಹಿಸುವ ಹೊರ ರಾಜ್ಯದ ಕಾರ್ಮಿಕರ ಮಾಹಿತಿಯಲ್ಲಿ ಗೊಂದಲವಿದ್ದಲ್ಲಿ ನಿರ್ಲಕ್ಷಿಸದೆ ಕೂಡಲೇ ಸಂಬAಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಕಾರ್ಮಿಕ ಇಲಾಖೆ ಅಧಿಕಾರಿ ರವಿಕುಮಾರ್ ಮಾತನಾಡಿ, ಕಾಫಿ ಎಸ್ಟೇಟ್‌ಗಳಿಗೆ ಬರುವ ಕಾರ್ಮಿಕರ ಮಾಹಿತಿಯನ್ನು ಕಲೆ ಹಾಕಿ ಇಲಾಖೆಗೆ ಸಲ್ಲಿಸಲು ಎಸ್ಟೇಟ್ ಮಾಲೀಕರಿಗೆ ಸೂಚಿಸಲಾಗಿದೆ. ಯಾವುದೇ ಕಾರ್ಮಿಕನ ವಿಳಾಸ, ಮಾಹಿತಿಯಲ್ಲಿ ಗೊಂದಲವಿದ್ದಲ್ಲಿ ಪೊಲೀಸ್ ಇಲಾಖೆ ಸಹಕಾರದೊಂದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.
ಚಿಕ್ಕಮಗಳೂರು ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ರಾಷ್ಟಿçÃಯ ಹೆದ್ದಾರಿ ಕಾಮಗಾರಿ ವೇಳೆ ಒಡೆದು ಹಾಕಲಾಗಿರುವ ಮನೆಗಳ ಫಲಾನುಭವಿಗಳಿಗೆ ಶೀಘ್ರವಾಗಿ ಪರಿಹಾರ ನೀಡಬೇಕು ಹಾಗೂ ಬೇಲೂರು-ಚಿಕ್ಕಮಗಳೂರು ರಾಷ್ಟಿçÃಯ ಹೆದ್ದಾರಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ, ಬೇಲೂರು-ಚಿಕ್ಕಮಗಳೂರು ರಾಷ್ಟಿçÃಯ ಹೆದ್ದಾರಿ ಕಾಮಗಾರಿಗೆ ಯೋಜನಾ ವರದಿ ವಿವರವನ್ನು ಸಲ್ಲಿಸಲಾಗಿದೆ. ಹೆದ್ದಾರಿ ನಿರ್ಮಾಣ ವೇಳೆಯಲ್ಲಿ ಒಡೆದು ಹಾಕಲಾಗಿರುವ ಮನೆಗಳ ಫಲಾನುಭವಿಗಳಿಗೆ ಪರಿಹಾರ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿ, ಜಿಲ್ಲೆಯಲ್ಲಿ ಅನೇಕ ಸರ್ಕಾರಿ ಆಸ್ಪತ್ರೆಗಳಿಗೆ ಆಂಬುಲೆನ್ಸ್ ಅವಶ್ಯಕತೆ ಇದೆ. ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಹಾಗೂ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸಿ ಕೊಡಲು ಕ್ರಮ ಕೈಗೊಳ್ಳಬೇಕು ಎಂದರು.
ಡಿಎಚ್‌ಒ ಡಾ.ಅಶ್ವಥ್ ಬಾಬು ಮಾತನಾಡಿ, ಜಿಲ್ಲೆಗೆ ಒಟ್ಟು ೯ ಆಂಬುಲೆನ್ಸ್ ಗಳ ಅಗತ್ಯವಿದೆ. ಇಲಾಖೆ ವತಿಯಿಂದ ಸದ್ಯ ೭ ಅಂಬುಲೆನ್ಸ್ಗಳು ಬಂದಿದ್ದು, ಉಳಿದ ಎರಡು ವಾಹನಗಳ ವ್ಯವಸ್ಥೆಯನ್ನು ಶೀಘ್ರವಾಗಿ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮಾತನಾಡಿ, ಮಳೆಯಿಂದ ಹಾನಿಯಾಗಿರುವ ರಸ್ತೆ ಹಾಗೂ ವಿದ್ಯುತ್ ಕಂಬಗಳ ವ್ಯವಸ್ಥೆಯನ್ನು ಪರಿಶೀಲಿಸಿ ಅವುಗಳನ್ನು ದುರಸ್ಥಿಗೊಳಿಸಿ ಯಾವುದೇ ಅಪಘಾತ ಸಂಭವಿಸದAತೆ ಎಚ್ಚರಿಕೆ ವಹಿಸಬೇಕು. ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯನ್ನು ಜನ ಸಾಮಾನ್ಯರಿಗೆ ತಿಳಿಸಿ ಅರ್ಹ ಫಲಾನುಭವಿಗಳಿಗೆ ಯೋಜನೆಯ ಫಲ ಸಿಗುವಂತೆ ಮಾಡಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಪಂ ಸಿಇಒ ಎಚ್.ಎಸ್ ಕೀರ್ತನಾ, ಎಸ್‌ಪಿ ವಿಕ್ರಮ ಅಮಟೆ, ಚಿಕ್ಕಮಗಳೂರು ಉಪವಿಭಾಗಾಧಿಕಾರಿ ದಲ್ಜಿತ್ ಕುಮಾರ್, ಮೂಡಿಗೆರೆ ಶಾಸಕಿ ನಯನ ಮೋಟಮ್ಮ, ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಬೀರೂರು ಪುರಸಭೆ ಅಧ್ಯಕ್ಷೆ ವನಿತಾ ಮತ್ತಿತರರಿದ್ದರು.