ಮೈಸೂರು: ಯಾದವಗಿರಿಯಲ್ಲಿ ಸ್ಕೂಟರ್‌ಗೆ ಕಾರು ಡಿಕ್ಕಿಯಾಯಾಗಿ ಇಬ್ಬರು ಗಾಯಗೊಂಡಿದ್ದಾರೆ.
ಯಾದವಗಿರಿಯ ಮೋಹನ್ ಮತ್ತು ನಿರಂಜನ್ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಒಂಟಿಕೊಪ್ಪಲಿನ ಹೇಮಾ ಅವರು ಕಾರಿನಲ್ಲಿ ಯಾದವಗಿರಿಯ ಮುಖ್ಯರಸ್ತೆಯಲ್ಲಿ ತೆರಳುತ್ತಿದ್ದಾಗ ಕಾರು ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಚಲಿಸಿ ಎದುರಿಗೆ ಬಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಗಾಯಾಳು ಮೋಹನ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವಿ.ವಿ. ಪುರಂ ಸಂಚಾರ ಠಾಣೆ ಪೊಲೀರು ತಿಳಿಸಿದ್ದಾರೆ.