ಜಕ್ರಿಬೆಟ್ಟು ಡ್ಯಾಂ ಬಳಿ ಸ್ಕೂಟರ್ ಪತ್ತೆ

Crime Logo
Published on

ಬಂಟ್ವಾಳ: ಇಲ್ಲಿನ ಜಕ್ರಿಬೆಟ್ಟು ಡ್ಯಾಂ ಬಳಿ ಮಂಗಳವಾರ ಸ್ಕೂಟರೊಂದು ಪತ್ತೆಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದಾಗ ಕಡೇಶಿವಾಲಯದ ಹೇಮಂತ್ ಎಂಬುವರಿಗೆ ಸೇರಿದ ವಾಹನ ಎಂದು ತಿಳಿದುಬಂದಿದೆ.

ಈತ ಅವಿವಾಹಿತನಾಗಿದ್ದು ಜುಲೈ 28ರಂದು ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜಕ್ರಿಬೆಟ್ಟು ನೇತ್ರಾವತಿ ನದಿ ಕಿನಾರೆಯಲ್ಲಿ ಸ್ಕೂಟರ್ ಪತ್ತೆಯಾಗಿರುವುದು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಹೇಮಂತ್ ನೀರಿನ ಫಿಲ್ಟರ್ ರಿಪೇರಿ ಕೆಲಸ ಮಾಡುತ್ತಿದ್ದು ಸೋಮವಾರದಿಂದ ನಾಪತ್ತೆಯಾಗಿದ್ದರು. ಈತನ ಪತ್ತೆಗೆ ಗ್ರಾಮಾಂತರ ಪೊಲೀಸರು, ನಗರ ಠಾಣಾ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ನದಿಗೆ ಹಾರಿರುವ ಶಂಕೆಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ನೇತ್ರಾವತಿ ನದಿಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net