

ಹಲಗೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಚಿಲ್ಲಾಪುರ ಬೈಪಾಸ್ ಬಳಿ ಭಾನುವಾರ ರಾತ್ರಿ ಸ್ಕೂಟರ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸಮೀಪದ ಬಾಳೆಹೊನ್ನಿಗ ಗ್ರಾಮದ ನಿವಾಸಿ ಬಿ.ಕೆ.ಮಂಜು (35) ಮೃತಪಟ್ಟವ. ಹಲಗೂರು ಸರ್ವೀಸ್ ರಸ್ತೆಯಲ್ಲಿ ಹೆದ್ದಾರಿ ದಾಟುವಾಗ ಮಳವಳ್ಳಿ ಕಡೆಯಿಂದ ವೇಗವಾಗಿ ಬಂದ ಕಾರೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೋಮವಾರ ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಲಾಯಿತು.
ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.