ಸ್ಕೂಟಿಗೆ ಕಾರು ಡಿಕ್ಕಿ

accident-15
Published on

ಸುಳ್ಯ: ಸ್ಕೂಟಿ ಕಾರು ಡಿಕ್ಕಿ ಹೊಡೆದು ಚಾಲಕ ಪರಾರಿಯಾಗಲು ಯತ್ನಿಸಿದ್ದು, ಸ್ಥಳೀಯರು ಕೂಡಲೇ ಆತನನ್ನು ಬೆನ್ನಟ್ಟಿ ಹಿಡಿದ ಘಟನೆ ಜುಲೈ 27ರಂದು ರಾತ್ರಿ ನಡೆದಿದೆ.

ಸುಳ್ಯದ ಖಾಸಗಿ ಬಸ್ ನಿಲ್ದಾಣ ಬಳಿ ಮಹಿಳೆಯೊಬ್ಬರು ಸ್ಕೂಟಿ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಎದುರುಗಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದು, ಚಾಲಕ ನಿಲ್ಲಿಸದೆ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಕಾರನ್ನು ಬೆನ್ನಟ್ಟಿ ಹಿಡಿದು ಆತನನ್ನು ಘಟನಾ ಸ್ಥಳಕ್ಕೆ ಕರೆ ತಂದಿದ್ದು, ಪೊಲೀಸರು ಆತನನ್ನು ಠಾಣೆಗೆ ಕರೆದೊಯ್ದು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಕಾರು ಚಾಲನೆ ಮಾಡುತ್ತಿದ್ದ ವ್ಯಕ್ತಿ ದೊಡ್ಡತೋಟ ನಿವಾಸಿ ಸಂದೀಪ್ ಎಂದು ಗುರುತಿಸಲಾಗಿದ್ದು, ಅಪಘಾತಕ್ಕೀಡಾದ ಮಹಿಳೆ ಬೀರಮಂಗಲ ನಿವಾಸಿ ಹಾಗೂ ಸ್ಥಳೀಯ ಶಾಲೆಯೊಂದರ ಶಿಕ್ಷಕಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net