ಸ್ಕೂಟಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಹಿಂಬದಿ ಕುಳಿತ್ತಿದ್ದ ಮಹಿಳೆ ಸಾವು

Bike Accident_2
Published on

ರಾಣೆಬೆನ್ನೂರ: ಬೈಕ್‌ವೊಂದು ಸ್ಕೂಟಿ ಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಕುಳಿತ್ತಿದ್ದ ಮಹಿಳೆ ಕೆಳಗೆ ಬಿದ್ದು ಮೃತಪಟ್ಟ ಘಟನೆ ಇಲ್ಲಿಯ ಮೇಡ್ಲೇರಿ ರಸ್ತೆಯಲ್ಲಿ ಗುರುವಾರ ಸಂಭವಿಸಿದೆ.
ನಗರದ ರತ್ನವ್ವ ಕೂಡ್ಪಪ್ಪ ಹಾವರಗಿ ಮೃತ ಮಹಿಳೆ.
ಇವರು ಮೇಡ್ಲೇರಿ ರಸ್ತೆಯಲ್ಲಿ ಬೈಕ್ ಮೇಲೆ ತೆರಳುತ್ತಿದ್ದ ಸಮಯದಲ್ಲಿ ಬೈಕ್ ಎದುರಿಗೆ ಹೊರಟಿದ್ದ ಸ್ಕೂಟಿಗೆ ಡಿಕ್ಕಿಯಾಗಿದೆ. ಈ ಸಮಯದಲ್ಲಿ ರತ್ನವ್ವ ಕೆಳಗೆ ಬಿದ್ದು ಗಂಭೀರವಾಗಿ ಗಯಗೊಂಡಿದ್ದರು. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net