ಯುವ ಜನತೆಯಲ್ಲಿ ಶಿಸ್ತು ಮೂಡಿಸುವ ಉದ್ದೇಶ

scout
Published on

ಕುಶಾಲನಗರ:

ವಿದ್ಯಾರ್ಥಿ ಸಮುದಾಯ ಮತ್ತು ಯುವಜನತೆಯಲ್ಲಿ ಶಿಸ್ತು - ಸಂಯಮ, ಭೌದ್ಧಿಕ, ಸಾಂಸ್ಕೃತಿಕ , ಆಧ್ಯಾತ್ಮಿಕ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿ ಅವರನ್ನು ದೇಶದ ಉತ್ತಮ ಪ್ರಜೆಗಳನ್ನಾಗಿ ರೂಪಿಸುವುದೇ ಸ್ಕೌಟ್ಸ್ ಮತ್ತು ಗೈಡ್ಸ್ ಸಂಘಟನೆಯ ಪ್ರಮುಖ ಧ್ಯೇಯವಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಹೇಳಿದರು.

ಕೊಡಗು ಜಿಲ್ಲೆಗೆ ಸೋಮವಾರ ಸಂಜೆ ಭೇಟಿ ನೀಡಿದ ಸಂದರ್ಭದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ತಾಲೂಕು ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಕುಶಾಲನಗರದಲ್ಲಿ ಏರ್ಪಡಿಸಿದ್ದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು. ಯುವ ಸಮೂಹ ದೇಶದ ಶಕ್ತಿ. ಹೀಗಾಗಿ, ಯುವ ಸಮುದಾಯ, ಸ್ಕೌಟ್ಸ್ ಮತ್ತು ಗೈಡ್ಸ್ ಉದ್ದೇಶದೊಂದಿಗೆ ರಾಷ್ಟಿçÃಯ ಭಾವೈಕ್ಯತೆ ಬೆಳೆಸಿಕೊಂಡು ದೇಶದ ಹಿತ ಕಾಯುವಲ್ಲಿ ಸಂಕಲ್ಪ ಹೊಂದಬೇಕು. ವಿಶ್ವ ಶಾಂತಿಯೇ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ

ಮೂಲ ಸಂಕಲ್ಪ. ಯುವ ಸಮೂಹ ದೇಶದ ಶಕ್ತಿ. ಹೀಗಾಗಿ, ಯುವ ಸಮುದಾಯ ಸ್ಕೌಟ್ಸ್ ಮತ್ತು ಗೈಡ್ಸ್ ಉದ್ದೇಶದೊಂದಿಗೆ ರಾಷ್ಟ್ರೀಯ ಭಾವೈಕ್ಯತೆ ಬೆಳೆಸಿಕೊಂಡು ದೇಶದ ಹಿತ ಕಾಯುವಲ್ಲಿ ಸಂಕಲ್ಪ ಹೊಂದಬೇಕು ಎಂದರು.

ಸ್ಕೌಟ್ಸ್, ಗೈಡ್ಸ್ ವಾರ್ಷಿಕ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದ ಸಂಸ್ಥೆಯ ರಾಜ್ಯ ಸ್ಕೌಟ್ಸ್ ವಿಭಾಗದ ಸಂಘಟನಾ ಆಯುಕ್ತ ಪ್ರಭಾಕರ್ ಭಟ್, ಪರಿಸರ ಪೂರಕ ಚಟುವಟಿಕೆಗಳು ಹಾಗೂ ಸ್ವಚ್ಛತಾ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಕುರಿತು ಮಾಹಿತಿ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕುಶಾಲನಗರ ತಾಲೂಕು ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ. ಪ್ರವೀಣ್ ದೇವರಗುಂಡ ಸೋಮಪ್ಪ ಮಾತನಾಡಿ, ಸ್ಥಳೀಯ ಸಂಸ್ಥೆಯ ವತಿಯಿಂದ ಕೈಗೊಂಡಿರುವ ಕಾರ್ಯಕ್ರಮಗಳು ಹಾಗೂ ಸೇವಾ ಚಟುವಟಿಕೆಗಳ ಕುರಿತು ತಿಳಿಸಿದರು.

ಜಿಲ್ಲಾ ಸಂಸ್ಥೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಟಿ.ಜಿ. ಪ್ರೇಮಕುಮಾರ್, ಜಿಲ್ಲಾ ಗೈಡ್ಸ್ ವಿಭಾಗದ ಸಹಾಯಕ ಆಯುಕ್ತೆ ಸಿ.ಎಂ. ಸುಲೋಚನಾ, ಸ್ಥಳೀಯ ಸಂಸ್ಥೆಯ ಕಾರ್ಯಾಧ್ಯಕ್ಷ ತಮ್ಮಯ್ಯ, ಉಪಾಧ್ಯಕ್ಷ ರಾಜೇಗೌಡ, ಅರುಣ್, ಕಾರ್ಯದರ್ಶಿ ಎಂ.ಎಸ್.ಗಣೇಶ್, ಸಹ ಕಾರ್ಯದರ್ಶಿ ಎಸ್.ಆರ್. ಶಿವಲಿಂಗ, ಸ್ಥಳೀಯ ಸಂಸ್ಥೆಯ ಕೋಶಾಧಿಕಾರಿ ನರೇಶ್, ಸಂಸ್ಥೆಯ ಪ್ರಮುಖರಾದ ಬಿ.ಜಿ. ವಾಣಿ, ಎ.ಆರ್.ಲತಾ, ಸುನಿಲ್ ರಾವ್, ಎಂ.ಎಸ್. ಕುಮಾರ್, ಎಂ.ಮಧುಸೂದನ್, ಬಾಪು, ವೇಣು ಆಚಾರ್ಯ, ವಸಂತ್, , ರಾಜೇಶ್, ಜಯರಾಜ್ ಮೊದಲಾದವರು ಇದ್ದರು. ಇದೇ ವೇಳೆ ರಾಜ್ಯ ಸಂಸ್ಥೆಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಅವರನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಕುಶಾಲನಗರ ತಾಲೂಕು

ಸ್ಥಳೀಯ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net