ಕುಶಾಲನಗರದಲ್ಲಿ ಡಿ.21, 22ರಂದು ಜಿಲ್ಲಾಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ರ‍್ಯಾಲಿ

scout
Published on

ಕುಶಾಲನಗರ:

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಕುಶಾಲನಗರ ಸ್ಥಳೀಯ ಸಂಸ್ಥೆ ವತಿಯಿಂದ ಕುಶಾಲನಗರ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಡಿ.21, 22ರಂದು ಕೊಡಗು ಜಿಲ್ಲಾಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ರ‍್ಯಾಲಿ ಏರ್ಪಡಿಸಲಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿಮ್ಯಾಥ್ಯೂ ತಿಳಿಸಿದ್ದಾರೆ.

ಡಿ.21 ರಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಮಕ್ಕಳ ರ‍್ಯಾಲಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಚಾಲನೆ ನೀಡಲಿದ್ದಾರೆ. ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ತಹಸೀಲ್ದಾರ್ ಕಿರಣ್ ಗೌರಯ್ಯ ಮತ್ತಿತರರು ಭಾಗವಹಿಸುವರು ಎಂದು ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಜಿಲ್ಲೆಯ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಂದ 700 ಮಕ್ಕಳು ಭಾಗವಹಿಸಲಿದ್ದಾರೆ.

ಎರಡು ದಿನಗಳ ಕಾಲ ವಸತಿ ಸೌಕರ್ಯದೊಂದಿಗೆ ವಿವಿಧ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ.

ಡಿ.22 ರಂದು ದೈಹಿಕ ಶಿಕ್ಷಣ ಸಂಪನ್ಮೂಲ ವ್ಯಕ್ತಿ ಡಾ. ಸದಾಶಿವಯ್ಯ ಎಸ್.ಪಲ್ಲೇದ್ ನೇತೃತ್ವದಲ್ಲಿ ಗ್ರಾಮೀಣ ಕ್ರೀಡಾಕೂಟ ನಡೆಸಲಾಗುವುದು. ಅಂದು ಅಪರಾಹ್ನ 2 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ ಎಂದರು.

ಸ್ಕೌಟ್ಸ್ ಮತ್ತು ಗೈಡ್ಸ್ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ. ಪ್ರವೀಣ್ ದೇವರಗುಂಡ, ಜಿಲ್ಲಾ ಸ್ಕೌಟ್ಸ್ ವಿಭಾಗದ ಆಯುಕ್ತ ಜಿಮ್ಮಿ ಸಿಕ್ವೇರಾ, ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ.ಪ್ರೇಮಕುಮಾರ್, ಕೋಶಾಧಿಕಾರಿ ಟಿ.ಎಂ.ಮುದ್ದಯ್ಯ, ಜಿಲ್ಲಾ ಗೈಡ್ಸ್ ಸಹಾಯಕ ಆಯುಕ್ತೆ ಸಿ.ಎಂ. ಸುಲೋಚನ ಸುದ್ದಿಗೋಷ್ಠಿಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net