

ಮಡಿಕೇರಿ:
ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಭವನ ನಿರ್ಮಾಣಕ್ಕೆ 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ತಿಳಿಸಿದ್ದಾರೆ. ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪೊನ್ನಮ್ಮ ಕುಶಾಲಪ್ಪ ಭವನದ ಸಭಾಂಗಣದಲ್ಲಿ ಗುರುವಾರ ನಡೆದ ಪದಾಧಿಕಾರಿಗಳ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು.
ಸರ್ಕಾರ ಸ್ಕೌಟ್ಸ್ ಮತ್ತು ಗೈಡ್ಸ್ ಅಭಿವೃದ್ಧಿಗಾಗಿ ಅಗತ್ಯ ಸಹಕಾರ ನೀಡುತ್ತಿದ್ದು, ಆ ನಿಟ್ಟಿನಲ್ಲಿ ಇದನ್ನು ಬಳಸಿಕೊಂಡು ಅಭಿವೃದ್ಧಿಯತ್ತ ಮುನ್ನಡೆಯಬೇಕು.ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ಸ್ಥಳೀಯ ಸಂಘಟನೆಗಳಿಗೂ ಒದಗಿಸಲಾಗುವುದು. ಆ ನಿಟ್ಟಿನಲ್ಲಿ ಖರ್ಚು ವೆಚ್ಚದ ಸಮಗ್ರ ದಾಖಲೆ ಒದಗಿಸುವಂತಾಗಬೇಕು. ಕೊಡಗು ಜಿಲ್ಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ 1918 ರಲ್ಲಿಯೇ ಆರಂಭವಾಗಿದೆ. ಎಲ್ಲರ ಸಹಕಾರದಿಂದ ಕ್ರಿಯಾಶೀಲ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿರುವುದು ಸಂತಸ ತಂದಿದೆ.
ಜಿಲ್ಲಾಡಳಿತ ಸಹ ಸಂಪೂರ್ಣ ಸಹಕಾರ ನೀಡುತ್ತಿದ್ದು, ಸ್ಕೌಟ್ಸ್ ಮತ್ತು ಗೈಡ್ಸ್ ಭವನ ನಿರ್ಮಾಣಕ್ಕೆ ನಿರಾಪೇಕ್ಷಣಾ ಪತ್ರ ಸಹ ನೀಡಿದೆ. ಸಮಾಜ ಸೇವೆಗೆ ಮತ್ತೊಂದು ಹೆಸರೇ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಎಂದರೆ ತಪ್ಪಾಗಲಾರದು. ರಾಷ್ಟಿçÃಯ ಹಬ್ಬಗಳು, ನಾಡಹಬ್ಬ, ಪರಿಸರ ದಿನಾಚರಣೆ, ಯೋಗ ದಿನಾಚರಣೆ, ಮಹಾತ್ಮ ಗಾಂಧಿ ಜಯಂತಿ, ಬೇಸಿಗೆ ಶಿಬಿರಗಳು, ಮಕ್ಕಳ ಮೇಳ ಹೀಗೆ ವಿವಿಧ ಕಾರ್ಯಕ್ರಮಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳುವುದರ ಮೂಲಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಎಂದರು.
ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ ಮಾತನಾಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಭವನ ನಿರ್ಮಾಣಕ್ಕೆ 2 ಕೋಟಿ ರೂ. ಅನುದಾನ ಬಿಡುಗಡೆ ಆಗಲಿದೆ. ಆ ನಿಟ್ಟಿನಲ್ಲಿ ಹುರುಪಿನಿಂದ ವಿವಿಧ ಚಟುವಟಿಕೆ ಹಮ್ಮಿಕೊಳ್ಳಲಾಗಿದೆ. ಆದಿವಾಸಿ ಮಕ್ಕಳಿಗೆ ಶಿಕ್ಷಣ ಮತ್ತು ಆರೋಗ್ಯ ಸಂಬAಧ ಜಾಗೃತಿ ಮೂಡಿಸಲಾಗುತ್ತದೆ ಎಂದು ಹೇಳಿದರು.
ಸಂಸ್ಥೆಯ ಸಹ ಆಯುಕ್ತ ಬಸವರಾಜ್ ಮಾತನಾಡಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಮನೆ ಮನೆ ತಲುಪಬೇಕು. ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುವಂತಾಗಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ ಹೊಸ ಹೊಸ ಘಟಕಗಳು ಆರಂಭವಾಗಬೇಕು ಎಂದರು.
ರಾಜ್ಯ ಸಂಘಟಕ ಪ್ರಭಾಕರ ಭಟ್ ಮಾತನಾಡಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯನ್ನು ಮತ್ತಷ್ಟು ಗಟ್ಟಿಗೊಳಿಸಬೇಕು. ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಮಾಡಬೇಕು. ಪರಿಸರ ದೀಪಾವಳಿ, ವನಮಹೋತ್ಸವ, ಮಳೆ ಕೊಯ್ಲು ಹೀಗೆ ವಿವಿಧ ಚಟುವಟಿಕೆಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ತೊಡಗಿಸಿಕೊಂಡು ರಾಷ್ಟçಮಟ್ಟದಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ , ಸಾರ್ವಜನಿಕ ಸಂಪರ್ಕ ಅಧಿಕಾರಿ ಟಿ.ಜಿ. ಪ್ರೇಮಕುಮಾರ್ ಮಾತನಾಡಿದರು.
ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ. ರಂಗಧಾಮಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಜ್ಯೋತಿ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಬಿ.ಸಿ. ದೊಡ್ಡೇಗೌಡ, ಜಿಲ್ಲಾ ಗೈಡ್ಸ್ ಆಯುಕ್ತೆ ರಾಣಿ ಮಾಚಯ್ಯ, ಜಿಲ್ಲಾ ಸ್ಥಾನಿಕ ಆಯುಕ್ತ ಎಚ್.ಆರ್. ಮುತ್ತಪ್ಪ, ಕಾರ್ಯದರ್ಶಿ ಎಂ.ಎA. ವಸಂತಿ, ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ ಮತ್ತಿತರರು ಇದ್ದರು.
ಇದೇ ವೇಳೆ ಸಂಸ್ಥೆಯ ರಾಜ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಸೇರಿದಂತೆ ವಿವಿಧ ಪ್ರಶಸ್ತಿ ಪಡೆದವರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಿ ಗೌರವಿಸಲಾಯಿತು.