

ಮಡಿಕೇರಿ:
ವಿದ್ಯಾರ್ಥಿಗಳು ಶಿಸ್ತುಬದ್ಧ ಜೀವನ ನಡೆÀಸುವ ಮೂಲಕ ಶೈಕ್ಷಣಿಕ ಗುರಿ ಸಾಧಿಸಬೇಕು ಎಂದು ಸಮಾಜ ಸೇವಕಿ ಜಯಂತಿ ಶೆಟ್ಟಿ ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಡಿಕೇರಿ ವಿಭಾಗದ ವತಿಯಿಂದ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಭಾನುವಾರ ನಡೆದ ಮಡಿಕೇರಿ ಸ್ಥಳೀಯ ಸಂಸ್ಥೆ ಮಟ್ಟದ ದೇಶಭಕ್ತಿ ಗೀತಾ ಗಾಯನ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯ ಜತೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲೂ ತೊಡಗಿಸಿಕೊಳ್ಳಬೇಕು. ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ, ಎನ್‌ಸಿಸಿ, ಕ್ರೀಡೆ ಮತ್ತಿತರ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು ಬೆಳೆಸುತ್ತದೆ. ಇಲ್ಲಿ ರೂಢಿಸಿಕೊಂಡ ಶಿಸ್ತು ಮುಂದೆ ಉತ್ತಮ ಜೀವನಕ್ಕೆ ಸಹಕಾರಿಯಾಗಲಿದೆ. ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹಲವು ಸರ್ಕಾರಿ ಹಾಗೂ ರಾಷ್ಟಿçÃಯ ಕಾರ್ಯಕ್ರಮಗಳಲ್ಲಿ ಶಿಸ್ತಿನಿಂದ ತೊಡಗಿಸಿಕೊಂಡು ಗಮನ ಸೆಳೆದಿದ್ದಾರೆ ಎಂದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯು ಮಾತನಾಡಿ ವಿದ್ಯಾರ್ಥಿಗಳು ದೇಶಭಕ್ತಿಯನ್ನು ಬೆಳೆಸಿಕೊಳ್ಳಬೇಕು ಮತ್ತು ಶಿಸ್ತನ್ನು ಅಳವಡಿಸಿಕೊಳ್ಳಬೇಕು. ದೇಶಭಕ್ತಿ, ಶಿಸ್ತು ಹಾಗೂ ಜಾತಿ ಮತ ಭೇದವಿಲ್ಲದ ಒಗ್ಗಟ್ಟಿನ ಜೀವನದ ಪಾಠವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಹೇಳಿಕೊಡುತ್ತದೆ. ಈ ಸಂಸ್ಥೆಯ ಭಾಗವಾಗಿರುವ ಎಲ್ಲಾ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ನಿಸ್ವಾರ್ಥದಿಂದ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಡಿಕೇರಿಯ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ದೇಶದ ಉಜ್ವಲ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳು ದೇಶಾಭಿಮಾನದೊಂದಿಗೆ ಗುರಿ ಸಾಧಿಸಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಇದಕ್ಕೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತಿದೆ. ದೇಶಭಕ್ತಿ ಗಾಯನದ ಮೂಲಕ ವಿದ್ಯಾರ್ಥಿಗಳು ತಮ್ಮ ದೇಶಾಭಿಮಾನ ಮೆರೆದಿದ್ದಾರೆ. ಈ ರೀತಿಯ ದೇಶಭಕ್ತಿಯ ಮತ್ತು ಪ್ರತಿಭಾನ್ವೇಷಣೆಯ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು.
ಸಂಸ್ಥೆಯ ಜಿಲ್ಲಾ ಆಯುಕ್ತ ಜಿಮ್ಮಿ ಸಿಕ್ವೇರಾ, ಜಿಲ್ಲಾ ತರಬೇತಿ ಆಯುಕ್ತ ಕೆ.ಯು. ರಂಜಿತ್, ಮೈಥಿಲಿ ರಾವ್, ಸಹಾಯಕ ಆಯುಕ್ತರಾದ ಸುಲೋಚನ, ಖಜಾಂಚಿ ಎಂ.ಎಸ್. ಶಾಂತಿ, ಸ್ಥಾನಿಕ ಆಯುಕ್ತ ಹೆಚ್.ಆರ್. ಮುತ್ತಪ್ಪ, ಕಾರ್ಯದರ್ಶಿಗಳಾದ ವಸಂತಿ, ನಳಿನಿ ಸುವರ್ಣ, ಸಹ ಕಾರ್ಯದರ್ಶಿಗಳಾದ ಬೊಳ್ಳಜಿರ ಬಿ. ಅಯ್ಯಪ್ಪ, ಸುಚಿತ ಕಾವೇರಪ್ಪ, ಸದಸ್ಯರುಗಳಾದ ಗುಲ್ ಷನ್, ಸೂರಜ್ ತಿಮ್ಮಯ್ಯ, ಲಕ್ಷಿö್ಮÃ, . ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಡಿಕೇರಿಯ ಉಪಾಧ್ಯಕ್ಷೆ ಎನ್.ಯು. ನೀಲಮ್ಮ, ಪ್ರಧಾನ ಕಾರ್ಯದರ್ಶಿ ಆರ್.ಪಿ. ಚಂದ್ರಶೇಖರ್ ಮತ್ತಿತರರು ಇದ್ದರು.