ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

mng-24aug-shakti
Published on



ಮಂಗಳೂರು : ನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ ಸಂಸ್ಥೆ ಮಂಗಳೂರು ವತಿಯಿಂದ
ದೇಶಭಕ್ತಿ ಗೀತ-ಗಾಯನ ಸ್ಪರ್ಧೆ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಶಕ್ತಿ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಡಾ.ಕೆ.ಸಿ. ನಾಕ್ ಮಾತನಾಡಿದ ಅವರು ಶಕ್ತಿ ವಿದ್ಯಾ ಸಂಸ್ಥೆಯು ಗುರುಕುಲ ಮಾದರಿ ಶಿಕ್ಷಣವನ್ನು ನೀಡುತ್ತಾ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಎಲ್ಲ ಸೌಲಭ್ಯ ಒದಗಿಸುತ್ತಿದೆ.
ಭಾರತ್ ಸ್ಕೌಟ್ ಗೈಡ್ ಸಂಸ್ಥೆಯು ಮಕ್ಕಳಲ್ಲಿ ದೇಶ ಪ್ರೇಮವನ್ನು ತುಂಬಿಸುವ ಉದ್ದೇಶದೊಂದಿಗೆ ಈ ಸ್ಪರ್ಧೆ
ಆಯೋಜಿಸಿದೆ ಎಂದರು.
ಭಾರತ್ ಸ್ಕೌಟ್ ಗೈಡ್ ಮಂಗಳೂರು ದಕ್ಷಿಣದ ಅಧ್ಯಕ್ಷ ವಸಂತ್ ರಾವ್, ಕಾರ್ಯದರ್ಶಿ ಪ್ರೀತಿ ಲೋಬೊ ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲ ರವಿಶಂಕರ್ ಹೆಗಡೆ , ಶಕ್ತಿ ವಿದ್ಯಾ ಸಂಸ್ಥೆಯ ಶಿಕ್ಷಕರಾದ ಸುರೇಖಾ, ಭವ್ಯ ಅಮೀನ್, ಪ್ರೇಮಲತಾ ಮತ್ತು ಸುಪ್ರಿಯ ಉಪಸ್ಥಿತರಿದ್ದರು. ಕನ್ನಡ ಅಧ್ಯಾಪಕ ಶರಣಪ್ಪ ಸ್ವಾಗತಿಸಿದರು. ಭವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net