ಸ್ಕೌಟ್ಸ್, ಗೈಡ್ಸ್ ದೀರ್ಘ ಸೇವೆಗಾಗಿ ಸನ್ಮಾನ

13 ckm 1
ಚಿಕ್ಕಮಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಬ್ಸ್ ಮತ್ತು ಬುಲ್‌ಬುಲ್ ಉತ್ಸವದಲ್ಲಿ ಜಿಲ್ಲಾ ತರಬೇತಿ ಆಯುಕ್ತೆ ಸಂಧ್ಯಾರಾಣಿ ಹಾಗೂ ಜಿಲ್ಲಾ ಕಾರ್ಯದರ್ಶಿ ನೀಲಕಂಠಚಾರ್ಯ ಅವರು ಸ್ಕೌಟ್ಸ್ ಅಂಡ್ ಗೈಡ್ಸ್ನಲ್ಲಿ ಸಲ್ಲಿಸಿದ ದೀರ್ಘಕಾಲದ ಅವಿರತ ಸೇವೆಯನ್ನು ಪರಿಗಣಿಸಿ ಸನ್ಮಾನಿಸಲಾಯಿತು. ಬಿ.ಎಲ್.ಶಂಕರ್, ಎಚ್.ಡಿ.ತಮ್ಮಯ್ಯ, ಮಹಮದ್ ನಯಾಜ್, ಷಡಾಕ್ಷರಿ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಜಿಲ್ಲಾ ತರಬೇತಿ ಆಯುಕ್ತೆ ಸಂಧ್ಯಾರಾಣಿ ಹಾಗೂ ಜಿಲ್ಲಾ ಕಾರ್ಯದರ್ಶಿ ನೀಲಕಂಠಚಾರ್ಯ ಅವರು ಸ್ಕೌಟ್ಸ್ ಅಂಡ್ ಗೈಡ್ಸ್ನಲ್ಲಿ ಸಲ್ಲಿಸಿದ ದೀರ್ಘಕಾಲದ ಅವಿರತ ಸೇವೆಯನ್ನು ಪರಿಗಣಿಸಿ ಚಿಕ್ಕಮಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಬ್ಸ್ ಮತ್ತು ಬುಲ್‌ಬುಲ್ ಉತ್ಸವದಲ್ಲಿ ಚಿತ್ರಕಲಾ ಪರಿಷತ್‌ನ ಅಧ್ಯಕ್ಷ ಬಿ.ಎಲ್ ಶಂಕರ್ ಸೇರಿದಂತೆ ಗಣ್ಯರು ಸನ್ಮಾನಿಸಿದರು.

ಸಂದ್ಯಾರಾಣಿ ಅವರು ಕಳೆದ ೪೮ ವರ್ಷಗಳಿಂದ ತಾವು ಸೇವೆ ನಿಲ್ಲಿಸುತ್ತಿರುವ ಸೇಂಟ್ ಜೋಸೆಫ್ ಶಾಲೆಯಲ್ಲಿ ಕಬ್ಸ್ ಘಟಕವನ್ನು ನಡೆಸುವುದರ ಜೊತೆಗೆ ಹೆಚ್ಚಿನ ತರಬೇತಿ ಪಡೆದು ರಾಜ್ಯದಾದ್ಯಂತ ೭೦ ಕ್ಕೂ ಹೆಚ್ಚು ಶಿಕ್ಷಕರ ತರಬೇತಿ ಶಿಬಿರಗಳನ್ನು ನಡೆಸಿದ್ದಾರೆ. ಈ ಮೂಲಕ ಸಾವಿರಾರು ಕಬ್ಸ್ ಮತ್ತು ಬುಲ್‌ಬುಲ್ಸ್ ಉತ್ಸವಗಳ ನಾಯಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇದಲ್ಲದೆ ಕಳೆದ ೧೮ ವರ್ಷಗಳಿಂದ ಜಿಲ್ಲಾ ತರಬೇತಿ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿರುತ್ತಾರೆ.
ಇನ್ನು ನೀಲಕಂಠಾಚಾರ್ಯ ಅವರು ಸುಮಾರು ೪೦ ವರ್ಷದ ಹಿಂದೆ ಸ್ಕೌಟ್ ಮಾಸ್ಟರ್ ಮೂಲ ತರಬೇತಿ ಪಡೆದು ಹಿರೇಗೌಜದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಳ ಪ್ರಾರಂಭಿಸಿದ್ದರು. ನಂತರದಲ್ಲಿ ತಾವು ಸೇವೆ ಸಲ್ಲಿಸಿದ ಕಡೆಯೆಲ್ಲಾ ಸ್ಕೌಟ್ಸ್ ಘಟಕಗಳನ್ನು ಪ್ರಾರಂಭಿಸಿ ಗ್ರಾಮೀಣ ಮಕ್ಕಳ ತರಬೇತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹಂತ ಹಂತವಾಗಿ ವಿವಿಧ ತರಬೇತಿಗಳನ್ನು ಪಡೆದು ಈಗ ತರಬೇತುದಾರರಾಗಿ ಕಾರ್ಯನಿರ್ವಹಿಸುವುದಲ್ಲದೆ, ಸ್ಥಳೀಯ ಹಾಗೂ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಪ್ರಸ್ತುತ ಜಿಲ್ಲಾ ಕಾರ್ಯದರ್ಶಿಯಾಗಿ ರಾಜ್ಯ ಮಟ್ಟದ ಕಬ್ ಮತ್ತು ಬುಲ್‌ಬುಲ್ ಉತ್ಸವವನ್ನು ಅತ್ಯಂತ ಯಶಸ್ವಿಯಾಗಿ ನಡೆಸಿರುತ್ತಾರೆ. ಈ ಇಬ್ಬರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಗಿದೆ ಎಂದು ಷಡಾಕ್ಷರಿ ತಿಳಿಸಿದರು. ಶಾಸಕ ಎಚ್.ಡಿ.ತಮ್ಮಯ್ಯ, ಸಿಡಿಎ ಅಧ್ಯಕ್ಷ ಮಹಮದ್ ನಯಾಜ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net