

ಮಾನ್ವಿ: ರಾಜ್ಯ ಸರ್ಕಾರ ಎಸ್ಸಿ-ಎಸ್ಟಿ ಸಮುದಾಯಗಳ ಅಭಿವೃದ್ಧಿಗೆ ಅನುದಾನ ಬಳಸದೆ ಅನ್ಯ ಯೋಜನೆಗಳಿಗೆ ಬಳಸುತ್ತಿರುವುದನ್ನು ಖಂಡಿಸಿ ಬಹುಜನ ಸಮಾಜ ಪಾರ್ಟಿ ಗ್ರೇಡ್-2 ತಹಸೀಲ್ದಾರ್ ಅಬ್ದುಲ್ ವಾಹಿದ್‌ಗೆ ಮಂಗಳವಾರ ಮನವಿ ಸಲ್ಲಿಸಿತು.
ರಾಜ್ಯ ಕಾರ್ಯದರ್ಶಿ ಶ್ಯಾಮಸುಂದರ ಕುಂಬದಾಳ ಮಾತನಾಡಿ, ರಾಜ್ಯದಲ್ಲಿ ಬಜೆಟ್‌ನಲ್ಲಿ ಮೀಸಲಿಟ್ಟಿದ್ದ ಅಂದಾಜು 25 ಸಾವಿರ ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಸಮುದಾಯಗಳ ಅಭಿವೃದ್ಧಿಗೆ ಬಳಸಬೇಕು. ಎಸ್ಸಿ-ಎಸ್ಟಿ ಸಮುದಾಯ ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಹಿಂದುಳಿದಿದ್ದು, ಮುಂದಿನ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡಿ, ಸಮರ್ಪಕವಾಗಿ ಬಳಲು ಕ್ರಮಕೈಗೊಳ್ಳಬೇಕು ಎಂದರು.