ಕಾಪು ಗುಜರಿ ಅಂಗಡಿ ಸ್ಫೋಟ ಪ್ರಕರಣದ ಗಾಯಾಳುಗಳಿಬ್ಬರು ಸಾವು

Nayaz
Published on

ಪಡುಬಿದ್ರಿ: ಕಾಪು ತಾಲೂಕಿನ ಗುಡ್ಡೆಕೇರಿಯಲ್ಲಿ ಸೋಮವಾರ ಬೆಳಗ್ಗೆ ಗುಜರಿ ಅಂಗಡಿಯಲ್ಲಿ ಕಂಪ್ರೆಸರ್ ಸಿಲಿಂಡರ್ ಹಾಗೂ ಗ್ಯಾಸ್ ಕಟರ್‌ನ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ನಿಯಾಜ್ ಹಾಗೂ ಈರಪ್ಪ ಗುರುವಾರ ಬೆಳಗ್ಗೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಒಟ್ಟು ಮೃತರ ಸಂಖ್ಯೆ ನಾಲ್ಕಕ್ಕೇರಿದೆ.
ಘಟನೆಯಲ್ಲಿ ಗುಜರಿ ಅಂಗಡಿ ಮಾಲೀಕ ಚಂದ್ರನಗರದ ರಜಾಬ್, ಮಲ್ಲಾರಿನ ರಜಾಬ್ ಬ್ಯಾರಿ ಸ್ಥಳದಲ್ಲೇ ಮೃತಪಟ್ಟಿದ್ದರು. 6 ಮಂದಿ ಗಾಯಗೊಂಡಿದ್ದರು. ಅಂಗಡಿ ಪಾಲುದಾರ ಚಂದ್ರನಗರದ ಹಸನಬ್ಬ, ಗುಡ್ಡಕೇರಿಯ ಸಾದಿಕ್, ಸಾಗರದ ನಿಯಾಜ್, ಗುಜರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವಲಸೆ ಕಾರ್ಮಿಕರಾದ ಈರಪ್ಪ ಮತ್ತು ವೀರೇಶ್ ಗಾಯಗೊಂಡಿದ್ದರು. ಈ ಪೈಕಿ ಇಬ್ಬರನ್ನು ಮಣಿಪಾಲ ಹಾಗೂ ನಾಲ್ವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತರರು ಅಪಾಯದಿಂದ ಪಾರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net