ಸಂಯೋಜಿತ ಕಾರ್ಯತಂತ್ರದಿಂದ ಶಾಶ್ವತ ಪರಿಹಾರ : ಸುರತ್ಕಲ್‌ನ ಎನ್‌ಐಟಿಕೆಯ ನಿರ್ದೇಶಕ ಪ್ರೊ.ಬಿ.ರವಿ ಅನಿಸಿಕೆ

New Project (5)
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಹೊಸ ಕಾಲದ ಸಂಕೀರ್ಣ ಬಿಕ್ಕಟ್ಟುಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ವಿಜ್ಞಾನ, ತಂತ್ರಜ್ಞಾನ ಮತ್ತು ಮಾನವಿಕ ಶೈಕ್ಷಣಿಕ ವಲಗಳ ಸಂಯೋಜಿತ ಕಾರ್ಯತಂತ್ರಗಳನ್ನು ಅನ್ವಯಿಸಬೇಕಾದ ಅಗತ್ಯವಿದೆ. ಕೃತಕ ಬುದ್ಧಿಮತ್ತೆಯಂತಹ ತಂತ್ರಜ್ಞಾನದ ಮೇಲೆ ಅವಲಂಬನೆಯಾಗದೆ ಜ್ಞಾನಾಧಾರಿತ ಸಾಮರ್ಥ್ಯ ಹೆಚ್ಚು ನೆಚ್ಚಿಕೊಳ್ಳಬೇಕು. ಹೊಸ ತಂತ್ರಜ್ಞಾನವನ್ನು ಎಚ್ಚರದಿಂದ ಬಳಸಿದರೆ ಯಶಸ್ಸು ಗಳಿಸಬಹುದು ಎಂದು ಸುರತ್ಕಲ್ ಎನ್‌ಐಟಿಕೆಯ ನಿರ್ದೇಶಕ ಪ್ರೊ.ಬಿ.ರವಿ ಹೇಳಿದರು. ಉಜಿರೆ ಎಸ್.ಡಿ.ಎಂ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಮಾತನಾಡಿದರು.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಡಾ.ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರ, ವಿಶ್ವಮಟ್ಟದಲ್ಲಿ ಹೆಗ್ಗುರುತು ಮೂಡಿಸಿದ್ದಾರೆ. ಹೊಸ ಕಾಲದ ಅಗತ್ಯಗಳಿಗೆ ತಕ್ಕಂತೆ ಸಾಮರ್ಥ್ಯ ರೂಪಿಸಿಕೊಂಡು ಸಾಧನೆಯ ಹೊಸ ಹೆಜ್ಜೆಗಳನ್ನು ಕ್ರಮಿಸಬೇಕು ಎಂದರು.

ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ.ಹಷೇರ್ಂದ್ರ ಕುಮಾರ್, ಡಾ.ಸತೀಶ್ಚಂದ್ರಎಸ್., ಎಸ್.ಡಿ.ಎಂ ಕಾಲೇಜಿನ ಅಕಾಡೆಮಿಕ್ ಸಂಯೋಜಕ ಎಸ್.ಎನ್.ಕಾಕತ್ಕರ್, ನಿವೃತ್ತ ಪ್ರಾಶುಂಪಾಲ ಡಾ.ಬಿ.ಎ.ಕುಮಾರ ಹೆಗ್ಡೆ, ನಿವೃತ್ತ ಉಪಪ್ರಾಂಶುಪಾಲ ಡಾ.ಶಲೀಫ್.ಬಿ.ಪಿ, ನಿವೃತ್ತ ಪ್ರಾಧ್ಯಾಪಕ ಡಾ.ರಾಮಚಂದ್ರ ಪುರೋಹಿತ, ಶಾಂತಿಪ್ರಕಾಶ್, ಬೋಧಕೇತರ ಸಿಬ್ಬಂದಿ ಸದಾನಂದ್ ಬಿ.ಮುಂಡಾಜೆ, ತುಕಾರಾಮ್ ಸಾಲಿಯಾನ್, ಪದವಿ ಹಾಗೂ ಸ್ನಾತಕೋತ್ತರ ಕೇಂದ್ರದ ವಿವಿಧ ವಿಭಾಗದ ವಿದ್ಯಾರ್ಥಿ ಪ್ರತಿನಿಧಿಗಳಾದ ಶ್ರವಣ, ಪ್ರಕೃತಿ, ಮೇಘನಾ, ಮಾರುತಿ ಭಗವಾನ್, ಅಮೀರ್, ಸುದೇಶ್‌ಗೌಡ ಉಪಸ್ಥಿತರಿದ್ದರು.

ನಿವೃತ್ತ ಬೋಧಕರು, ಬೋಧಕೇತರ ಸಿಬ್ಬಂದಿ, ರ‌್ಯಾಂಕ್ ವಿಜೇತರು, ಪಿಎಚ್.ಡಿ ಪದವೀಧರ ಅಧ್ಯಾಪಕರು, ವಿಶೇಷ ಸಾಧಕ ಅಧ್ಯಾಪಕರು, ವಿಶೇಷ ಸಾಧಕ ವಿದ್ಯಾರ್ಥಿಗಳು, ಕ್ರೀಡಾ ವಿಭಾಗದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಪತ್ರಿಕೋದ್ಯಮ ವಿಭಾಗದವಿದ್ಯಾರ್ಥಿಗಳ ’ಚಿಗುರು’ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಪ್ರಾಂಶುಪಾಲ ಪ್ರೊ.ವಿಶ್ವನಾಥ ಪಿ. ಸ್ವಾಗತಿಸಿದರು. ಉಪಪ್ರಾಂಶುಪಾಲೆ ನಂದಾಕುಮಾರಿ ವರದಿ ವಾಚಿಸಿದರು. ಕಾಲೇಜಿನ ಆಡಳಿತ ಮಂಡಳಿಯ ಕುಲಸಚಿವರಾದ ಶ್ರೀಧರ ಎನ್.ಭಟ್ಟ ವಂದಿಸಿದರು. ಡಾ.ನೆಫಿಸತ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net