

ಉಡುಪಿ: ಆಯುರ್ವೇದ ರೋಗಿಯ ದೇಹ ಪ್ರಕೃತಿಗನುಸಾರವಾಗಿ ಜೀವನ ಶೈಲಿ ರೂಪಿಸಲು ತಿಳಿಸುತ್ತದೆ. ಚಿಕಿತ್ಸೆಯಲ್ಲೂ ಪ್ರಾಕೃತಿಕ ಸಂಪನ್ಮೂಲಗಳಿಂದ ಲಭ್ಯವಾಗುವ ಔಷಧಗಳಿಗೆ ಪ್ರಾಮುಖ್ಯತೆಯನ್ನು ನೀಡಿರುವುದು ಆಯುರ್ವೇದದ ವೈಶಿಷ್ಟ$್ಯತೆ ಎಂದು ಕನ್ನಡ ಚಲನಚಿತ್ರರಂಗದ ಸಂಗೀತ ನಿರ್ದೇಶಕ ಗುರುಕಿರಣ್ ಶ್ಲಾಘಿಸಿದರು.
ಬುಧವಾರ ಕುತ್ಪಾಡಿ ಎಸ್.ಡಿ.ಎಂ. ಆಯುರ್ವೇದ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲೆ ಡಾ. ಮಮತಾ ಕೆ.ವಿ. ಅಧ್ಯಕ್ಷತೆಯನ್ನು ವಹಿಸಿದ್ದರು. ಆಸ್ಪತ್ರೆಯ ವೈದ್ಯಕಿಯ ಅಧೀಕ್ಷಕ ಡಾ. ನಾಗರಾಜ್ ಎಸ್., ಸಾಂಸತಿಕ ವಿಭಾಗದ ಮುಖ್ಯಸ್ಥ ಡಾ. ಸುಚೇತಾ ಕುಮಾರಿ, ಶೈಕ್ಷಣಿಕ ವಿಭಾಗದ ಮುಖ್ಯಸ್ಥೆ ಡಾ. ಶ್ರೀಲತಾ ಕಾಮತ್, ಸ್ನಾತಕೋತ್ತರ ವಿಭಾಗದ ಡೀನ್ ಡಾ. ಅಶೋಕ್ ಕುಮಾರ್ ಬಿ.ಎನ್. ಉಪಸ್ಥಿತರಿದ್ದರು.
ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿಯಾದ ಅರುಣ್ ಕಣಕಟ್ಟೆ ಸ್ವಾಗತಿಸಿದರು. ಆಡಳಿತ ವಿಭಾಗ ಮುಖ್ಯಸ್ಥ ಡಾ. ವೀರಕುಮಾರ ಕೆ. ವಾರ್ಷಿಕ ವರದಿ ವಾಚನ ಮಾಡಿದರು. ಸ್ನಾತಕ ವಿಭಾಗದ ಡೀನ್ ಡಾ. ರಜನೀಶ್ ವಿ. ಗಿರಿ ಪ್ರಶಸ್ತಿಗಳನ್ನು ಪಡೆದ ವಿದ್ಯಾರ್ಥಿಗಳನ್ನು ಪರಿಚಯಿಸಿದರು. ಆಟೋಟ ಸ್ಪರ್ಧೆ ಹಾಗೂ ಸಾಂಸತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳ ಪಟ್ಟಿಯನ್ನು ಪ್ರಾಧ್ಯಾಪಕ ಡಾ. ಎಸ್.ಆರ್. ಮೊಹರೆರ್ ಹಾಗೂ ಸಹಾಯಕ ಪ್ರಾಧ್ಯಾಪಕಿ ಡಾ. ಸುಷ್ಮಾ ವಾಚಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಮೇಘನಾ ಜಿ.ಕೆ. ವಂದಿಸಿದರು. ವಿದ್ಯಾರ್ಥಿ ಶ್ರಾವ್ಯ ಹಾಗೂ ಶ್ವೇತ ಕಾರ್ಯಕ್ರಮ ನಿರೂಪಿಸಿದರು.