

ಬೆಳ್ತಂಗಡಿ: ಎಲ್ಲ ಬಿ.ಎಡ್ ಶಿಕ್ಷಣ ಸಂಸ್ಥೆಗಳಿಗೆ ಎಸ್‌ಡಿಎಂ ಬಿ.ಎಡ್ ಕಾಲೇಜು ಮಾದರಿಯಾಗಬೇಕು. ಉತ್ತಮ ಜ್ಞಾನ ಗಳಿಕೆಯದಾಗ ಸಮಾಜದಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪಿಸಲು ಸಾಧ್ಯವಿದೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಹೇಳಿದರು.
ಉಜಿರೆ ಎಸ್.ಡಿ.ಎಂ. ಬಿ.ಎಡ್.ಕಾಲೇಜಿನ ನವೀಕೃತ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಮಾಹಿತಿ ತಂತ್ರಜ್ಞಾನ ಹಾಗೂ ವಸತಿ ನಿಲಯಗಳ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರಣ್ ವರ್ಮ ಮಾತನಾಡಿ, ವೃತ್ತಿಗಳನ್ನು ಪಡೆಯಬೇಕಾದರೆ ಶಿಕ್ಷಕರ ಪಾತ್ರ ಪ್ರಮುಖವಾಗುವುದು ಎಂದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್‌ಚಂದ್ರ ಎಸ್.ಮಾತನಾಡಿ, ಪ್ರಶಿಕ್ಷಣಾರ್ಥಿಗಳು ಭಾವೀ ಜೀವನದಲ್ಲಿ ಮತ್ತು ಸಮಾಜದಲ್ಲಿ ಸರ್ವತೋಮುಖವಾದ ದೃಷ್ಟಿಕೋನವನ್ನು ಇರಿಸಿಕೊಂಡು ಉತ್ತಮ ಶಿಕ್ಷಕರಾಗಬೇಕು ಎಂದರು.
ಶ್ರೀ ಧರ್ಮಸ್ಥಳ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಸಂತೋಷ್ ಸಲ್ಡಾನ ಮಾತನಾಡಿದರು. ಎಸ್‌ಡಿಎಂ ಸಂಸ್ಥೆಯ ವಿವಿಧ ಅಂಗಸಂಸ್ಥೆಗಳ ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು ಹಾಗೂ ಸಿಬ್ಬಂದಿ ಮತ್ತು ಎಸ್‌ಡಿಎಂ ಬಿ.ಎಡ್ ಕಾಲೇಜಿನ ಉಪನ್ಯಾಸಕರು, ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ನಾಯಕ ಕೀರ್ತನ್ ಕುಮಾರ್ ವಂದಿಸಿ, ತುಳಸಿ ನಿರೂಪಿಸಿದರು.