

ಬೆಳ್ತಂಗಡಿ: ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್‌ಎಸ್‌ಎಸ್ ಘಟಕದ ವತಿಯಿಂದ ಕೃಷಿ ಮಾಹಿತಿ ಮತ್ತು ಕೆಸರುಗದ್ದೆ ಕೂಟ ಇತ್ತೀಚೆಗೆ ಆಯೋಜಿಸಲಾಗಿತ್ತು .
ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಸಂತೋಷ್ ಅಧ್ಯಕ್ಷತೆ ವಹಿಸಿದ್ದರು. ಕೃಷಿಕ ಬೂಚ ನಾಯ್ಕ ಪೆರ್ಲ ವಿದ್ಯಾರ್ಥಿಗಳಿಗೆ ಕೃಷಿಯ ಮಹತ್ವ ಮತ್ತು ಗದ್ದೆ ಕೃಷಿ ಹಾಗೂ ಅಡಕೆ ತೋಟದ ಬಗ್ಗೆ ಮಾಹಿತಿ ನೀಡಿದರು.
ಎನ್‌ಎಸ್‌ಎಸ್‌ನ ಯೋಜನಾಧಿಕಾರಿ ಪ್ರಕಾಶ್ ಮತ್ತು ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.