ಅ.9 ರಂದು ವ್ಯಸನಮುಕ್ತ ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ

IMG-20231007-WA0001
Published on

ಗದಗ:

ಗಾಂಧಿ ಜಯಂತಿ ಸಂಭ್ರಮಾಚರಣೆ ನಿಮಿತ್ಯ ವ್ಯಸನಮುಕ್ತ ಸಾಧಕರಿಗೆ ಅಭಿನಂದನೆ ಮತ್ತು ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಶಿವಾನಂದ ಬೆಂತೂರು ಪದಗ್ರಹಣ ಕಾರ್ಯಕ್ರಮವನ್ನು ಅ.9 ರಂದು ಬೆಳಗ್ಗೆ 11 ಗಂಟೆಗೆ ನಗರದ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜನಜಾಗೃತಿ ಸಂಘದ ಅಧ್ಯಕ್ಷ ಎಚ್.ಬಿ. ಅಸೂಟಿ ಹೇಳಿದರು.

ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಟಿ ನಡೆಸಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಜನಜಾಗೃತಿ ವೇದಿಕೆ, ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ಜರಗುವುದು. ಕಾರ್ಯಕ್ರಮವನ್ನು ಸಚಿವ ಎಚ್.ಕೆ. ಪಾಟೀಲ ಉದ್ಘಾಟಿಸಿವರು. ತೋಂಟದ ಸಿದ್ದರಾಮ ಶ್ರೀಗಳು ಸಾನ್ನಿಧ್ಯ ವಹಿಸುವರು ಎಂದು ಹೇಳಿದರು.

ಜಿಲ್ಲಾ ಜನಜಾಗೃತಿ ವೇದಿಕೆ ಮಾಜಿ ಜಿಲ್ಲಾಧ್ಯಕ್ಷ ಶಿವಪ್ರಕಾಶ ಮಹಾಜನ ಶೆಟ್ಟರ ಮಾತನಾಡಿ, ಜನಜಾಗೃತಿ ವೇದಿಕೆಯಿಂದ ಜಿಲ್ಲೆಯಲ್ಲಿ 39 ಮದ್ಯವರ್ಜನ ಶಿಬಿರ ಹಮ್ಮಿಕೊಳ್ಳಲಾಗಿದೆ. 2847 ಮದ್ಯ ವ್ಯಸನಿಗಳನ್ನು ಮದ್ಯ ಮುಕ್ತರನ್ನಾಗಿ ಮಾಡಲಾಗಿದೆ. 270 ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಮಾಡಲಾಗಿದೆ. ಮುಂದುವರಿದು ಕಾರ್ಯಕ್ರಮದಲ್ಲಿ ಸರ್ಕಾರ ಮದ್ಯದ ಅಂಗಡಿಗಳಿ ಅನುಮತಿ ನೀಡುತ್ತಿರುವುದನ್ನು ವಿರೋಧಿಸುವ ನಿರ್ಣಯ ಕೈಗೊಳ್ಳಲಾಗುವುದು. 2000 ಸಾವಿರಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಜನಜಾಗೃತಿ ವೇದಿಕೆ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಶಿವಾನಂದ ಬಂತೂರು ಮಾತನಾಡಿ, ಅ.9 ರಂದು ಗಾಂಧಿಯವರ ಭಾವಚಿತ್ರ ಮೆರವಣಿಗೆ ಮತ್ತು ಪೊಲೀಸ್ ಪೆರೆಡ್ ನಡೆಸಲಾಗುವುದು ಎಂದರು.

ಸುದ್ದಿಗೋಷ್ಟಿಯಲ್ಲಿ ಯೋಗೀಶ್ ಎ, ಶಿವಪ್ರಕಾಶ ಮಜಾಜನಶಟ್ಟರ, ಚಂದ್ರಶೇಖರ ಹುಣಸಿಕಟ್ಟಿ, ಸುರೇಂದ್ರ ನಾಯಕ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net