* 224 ವಿಧಾನಸಭೆ ಕ್ಷೇತ್ರಗಳಲ್ಲಿ ಎಸ್‌ಡಿಪಿಐ ಸ್ಪರ್ಧೆ

PHOTO-1-002
Published on

ಚಿತ್ರದುರ್ಗ: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಸಲಾಗುವುದು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯಪ್ರಧಾನ ಕಾರ‌್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚಿತ್ರದುರ್ಗದಿಂದ ಬಾಳೆಕಾಯಿ ಶ್ರೀನಿವಾಸ್ ಸೇರಿ 44 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿ ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದ್ದಾರೆ ಎಂದರು.

ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿ ಕೂಡಲೇ ಜಾರಿಗೊಳಿಸಲು, ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ಸರ್ಕಾರವನ್ನು ಒತ್ತಾಯಿಸಿದರು. ಚಿತ್ರದುರ್ಗದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಆರಂಭವಾಗಿಲ್ಲ. ಒಳ ಚರಂಡಿ ಹಾಗೂ ರಸ್ತೆ ವಿಭಜಕಗಳು ಅವೈಜ್ಞಾನಿಕವಾಗಿವೆ. ನಗರದ 26 ಘೋಷಿತ ಕೊಳೆಗೇರಿಗಳಲ್ಲಿ ಹಕ್ಕುಪತ್ರಗಳ ವಿತರಣೆ ಅರ್ಧಕ್ಕೆ ನಿಂತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಾಳೆಕಾಯಿ ಶ್ರೀನಿವಾಸ್, ಸೈಯದ್ ಸಾದತ್, ಅಬ್ದುಲ್ ಲತೀಫ್ ಪುತ್ತೂರು, ಕಮ್ರಾನ್ ಅಲಿ, ಅಕ್ಬರ್ ಅಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net