ಕೆ.ಎಸ್.ಈಶ್ವರಪ್ಪ ಬಂಧಿಸುವಂತೆ ಎಸ್‌ಡಿಪಿಐ ಆಗ್ರಹ

sdpi protest
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸಿ ಎಸ್‌ಡಿಪಿಐ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಮಜರ್ ಅಹಮದ್, ಇಮ್ರಾನ್, ಇಸಾಕ್, ಹಬೀಬ್, ಸಜೀಲ್ ಬೇಗ್, ಅನ್ವರ್ ಖಾನ್ ಇದ್ದರು.
Published on

ಶಿವಮೊಗ್ಗ: ನಗರದಲ್ಲಿ ಅಶಾಂತಿ ಉಂಟು ಮಾಡುತ್ತಿರುವ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಎಸ್‌ಡಿಪಿಐ ಕಾರ್ಯಕರ್ತರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.

ಈಶ್ವರಪ್ಪ ಅವರು ಮುಸ್ಲಿಂ ಸಮುದಾಯದವರನ್ನು ಗೂಂಡಾಗಳು ಎಂದು ಟೀಕಿಸುತ್ತಿದ್ದಾರೆ. ಆದರೆ ಇವರ ವಿರುದ್ಧ ಕ್ರಮ ಜರುಗಿಸದೆ, ಬಂಧಿಸದ ಕಾರಣ ಪ್ರಚೋದನಕಾರಿ ಭಾಷಣ ಮಾಡುತ್ತಿದ್ದಾರೆ ಎಂದು ದೂರಿದರು.

ಬಾಂಗ್ಲಾ ದೇಶದ ಹಿಂದು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಈಶ್ವರಪ್ಪ ಅವರು ಮುಸ್ಲಿಮರು ಅನ್ನ ಹಾಕಿದ ಮನೆಗೆ ಕನ್ನ ಹಾಕುವವರು. ಇಲ್ಲಿಯೂ ಸಿಕ್ಕ ಸಿಕ್ಕಲ್ಲಿ ಮುಸ್ಲಿಮರಿಗೆ ಹೊಡೆಯುತ್ತೇವೆ ಎಂದು ಪ್ರಚೋದನಾಕಾರಿ ಭಾಷಣ ಮಾಡಿರುತ್ತಾರೆ. ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಇಮ್ರಾನ್, ನಗರಾಧ್ಯಕ್ಷ ಮಜರ್ ಅಹಮದ್, ಇಸಾಕ್, ಹಬೀಬ್, ಸಜೀಲ್ ಬೇಗ್, ಅನ್ವರ್ ಖಾನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net