ಎಸ್​ಡಿಪಿಐ ಪ್ರತಿಭಟನೆ

New SDPI New
Published on

ಹುಬ್ಬಳ್ಳಿ : ಉತ್ತರ ಪ್ರದೇಶದ ಸಂಬಲ್​ನಲ್ಲಿ ಶಾಹಿ ಜುಮ್ಮಾ ಮಸೀದಿ ಸಮೀಕ್ಷೆ ನಡೆಸಲು ಅನುಮತಿ ನೀಡುವ ಮೂಲಕ ಆರಾಧನಾ ಸ್ಥಳಗಳ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಎಸ್​ಡಿಪಿಐ ಸಂಘಟನೆ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಹಳೇಹುಬ್ಬಳ್ಳಿಯ ನ್ಯೂ ಇಂಗ್ಲಿಷ್ ಸ್ಕೂಲ್ ವೃತ್ತದ ಬಳಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಸಲೀಂ ಹಳ್ಯಾಳ ಹಾಗೂ ಪ್ರಧಾನ ಕಾರ್ಯದರ್ಶಿ ಗಫೂರ್ ಅಹ್ಮದ್ ಕುರಹಟ್ಟಿ, ಗೋಲಿಬಾರ್ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ರಫೀಕ್ ಲಷ್ಕರ್, ಆದಮ್ ಅತ್ತಾರ, ಸಲ್ಮಾನ್ ಕಲ್ಲಿಗಾರ, ಮಲ್ಲಿಕ್​ಜಾನ್ ಕಳಸ, ಜಬ್ಬಾರ್ ಲಷ್ಕರ್, ಶಾನು ಕೋಳಿ ಹಾಗೂ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net