ಬಿಜೆಪಿ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

758-200
Published on


ಮೈಸೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸೇರಿದಂತೆ ಹಲವು ಆಧಾರರಹಿತ ಸುಳ್ಳು ಪ್ರಕರಣಗಳನ್ನು ನೆಪವಾಗಿಟ್ಟುಕೊಂಡು ಬಿಜೆಪಿ ಸರ್ಕಾರ ಎಸ್‌ಡಿಪಿಐ ವಿರುದ್ಧ ಷಡ್ಯಂತ್ರ ರೂಪಿಸುತ್ತಿದೆ ಎಂದು ಆರೋಪಿಸಿ ಎಸ್‌ಡಿಪಿಐ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.


ಅಶೋಕ ರಸ್ತೆಯಲ್ಲಿರುವ ಮಿಲಾದ್ ಪಾರ್ಕ್ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ಎಸ್‌ಡಿಪಿಐ ರಾಜ್ಯ ಉಪಾಧ್ಯಕ್ಷ ಎನ್.ದೇವನೂರು ಪುಟ್ಟನಂಜಯ್ಯ, ಜಿಲ್ಲಾಧ್ಯಕ್ಷ ರಫತ್ ಖಾನ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಫೀವುಲ್ಲ, ರಾಜ್ಯ ಸಮಿತಿ ಸದಸ್ಯ ಅಜ್ಮದ್ ಖಾನ್, ಮುಖಂಡರಾದ ಎಸ್.ಸ್ವಾಮಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net