

ವಿಜಯವಾಣಿ ಸುದ್ದಿಜಾಲ ಉಡುಪಿ
ಶ್ರೀರಂಗಪಟ್ಟಣದ ಕಾಂಗ್ರೆಸ್ ಶಾಸಕ ಬಂಡೀಸಿದ್ದೇಗೌಡ ಅವರ ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ್ದು, ಅವರನ್ನು ಶಾಸಕ ಸ್ಥಾನದಿಂದ ಕೂಡಲೇ ವಜಾ ಮಾಡಬೇಕು. ಕಾಂಗ್ರೆಸ್ ಸರ್ಕಾರ ಮುಸ್ಲೀಮರ ವೋಟ್ ಪಡೆದು ನಿರಂತರವಾಗಿ ಮುಸ್ಲೀಮರ ವಿರುದ್ಧವೇ ಕೆಲಸ ಮಾಡಿದೆ. ಅಧಿಕಾರಕ್ಕೆ ಬಂದರೆ ಹಿಜಾಬ್ ನಿಷೇಧ ಹಿಂಪಡೆಯುತ್ತೇವೆ ಎಂದಿದ್ದ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿ 2 ವರ್ಷವಾದರೂ ಅದರ ಬಗ್ಗೆ ಮಾತೆತ್ತುತ್ತಿಲ್ಲ ಎಂದು ಎಸ್ಡಿಪಿಐ ಉಡುಪಿ ಜಿಲ್ಲಾ ಉಪಾಧ್ಯಕ್ಷ ಹನೀಫ್ ಮೂಳೂರು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಶುದ್ದೀನ್, ಉಡುಪಿ ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಬಾವ ವಿಮೆನ್, ಇಂಡಿಯಾ ಮೂವ್ಮೆಂಟ್ ಜಿಲ್ಲಾಧ್ಯಕ್ಷೆ ನಾಝಿಯಾ ನಸ್ರುಲ್ಲ ಹಾಗೂ ಮಹಿಳಾ ಪದಾಧಿಕಾರಿಗಳು ಉಪಸ್ಥಿತರಿದ್ದರು.